--Ads--

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಕಲಚೇತನರ ಕುಂದುಕೊರತೆಗಳ ಸಭೆ

On: September 26, 2026 10:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಕಲಚೇತನರ ಕುಂದುಕೊರತೆಗಳ ಸಭೆ

ಶಿಡ್ಲಘಟ್ಟ : ಹಲವು ತಿಂಗಳಿಂದ ಪಿಂಚಣಿ ದೊರೆಯದಿರುವುದು, ಸಾರ್ವಜನಿಕ ಕಟ್ಟಡಗಳು ಹಾಗೂ ಶೌಚಾಲಯಗಳು ವಿಕಲಚೇತನ ಸ್ನೇಹಿಯಾಗಿ ಇಲ್ಲದಿರುವುದು,ಗ್ರಾಮ ಪಂಚಾಯಿತಿಗಳಲ್ಲಿ ವಿಕಲಚೇತನರಿಗಾಗಿ ಮೀಸಲಿರುವ ಅನುದಾನದ ಬಳಕೆ, ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳ ಸೌಲಭ್ಯಗಳು ಸಮರ್ಪಕವಾಗಿ ತಲುಪದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಕಲಚೇತನರ ಕುಂದುಕೊರತೆಗಳ ಸಭೆಯಲ್ಲಿ ವಿಕಲಚೇತನರ ಪ್ರತಿನಿಧಿಗಳು ವಿವಿಧ ಸಮಸ್ಯೆಗಳ ಕುರಿತು
ಅಧಿಕಾರಿಗಳ ಜತೆ ಚರ್ಚಿಸಿದರು.

ಸರ್ಕಾರದ ನಿಯಮದಂತೆ ವಿಕಲಚೇತನರ ಕುಂದುಕೊರತೆಗಳ ಸಮಿತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಬೇಕು ಆದರೆ ತಾಲ್ಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಸಭೆ ನಡೆದಿರಲಿಲ್ಲ ಎಂದು ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು ಸಮಿತಿಯಲ್ಲಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮುಂದಿನ ಸಭೆಗೆ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಾರ್ವಜನಿಕ ಕಟ್ಟಡಗಳು ಮತ್ತು ಶೌಚಾಲಯಗಳನ್ನು ವಿಕಲಚೇತನರು ಸುಲಭವಾಗಿ ಬಳಸುವ ರೀತಿಯಲ್ಲಿ ನಿರ್ಮಿಸಬೇಕು ಎಂದು ಒತ್ತಾಯಿಸಲಾಯಿತು ಈಗಿರುವ ಕೆಲವು ವಿಕಲಚೇತನ ಸ್ನೇಹಿ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ ಎಂದು ಪ್ರತಿನಿಧಿಗಳು ಗಮನ ಸೆಳೆದರು.

ತಾಲ್ಲೂಕು ಪಂಚಾಯತಿ ಇ.ಒ.ಆ‌ರ್.ಹೇಮಾವತಿ ಮಾತನಾಡಿ,ಬೆನ್ನುಹುರಿ ಅಪಘಾತದಿಂದ ಅಂಗವೈಕಲ್ಯ ಹೊಂದಿರುವವರು ಸೇರಿದಂತೆ ಹಲವು ವಿಕಲಚೇತನರಿಗೆ ಅಗತ್ಯ ಚಿಕಿತ್ಸೆ, ಔಷಧ ಹಾಗೂ ಸಹಾಯಕ ಸಾಧನಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಅಹವಾಲು ಕೇಳಿಬಂತು ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಲಭ್ಯವಾಗುವ ವಿಕಲಚೇತನರ ಶೇ,5ರ ಅನುದಾನವನ್ನು ಶಿಕ್ಷಣ, ಆರೋಗ್ಯ, ಜೀವನೋಪಾಯ ಸೇರಿದಂತೆ ಮಾರ್ಗಸೂಚಿಯಲ್ಲಿರುವ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಬೇಕು ಎಂದು ಒತ್ತಾಯಿಸಲಾಯಿತು. ಮುಂದಿನ ಕ್ರಿಯಾಯೋಜನೆಗಳಲ್ಲಿ ಈ ಅಂಶಗಳಿಗೆ ಆದ್ಯತೆ ನೀಡುವಂತೆ ಪಂಚಾಯಿತಿಗಳಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದರು.

ಗ್ರೇಡ್ 2 ತಹಶೀಲ್ದಾರ್ ಕೆ.ಎನ್.ಮಂಜುನಾಥ್ ಮಾತನಾಡಿ , ಸಭೆಗೆ ಮುಂಚಿತವಾಗಿ ಸಮರ್ಪಕ ಮಾಹಿತಿ ನೀಡದ ಕಾರಣ ಬೆರಳೆಣಿಕೆಯಷ್ಟು ವಿಕಲಚೇತನರು ಮಾತ್ರ ಭಾಗವಹಿಸಿದ್ದ ಕಾರಣ ಮುಂದಿನ ಸಭೆಯ ದಿನಾಂಕವನ್ನು ಮುಂಚಿತವಾಗಿ ಪ್ರಕಟಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಲವು ವಿಕಲಚೇತನರಿಗೆ ತಿಂಗಳುಗಳಿಂದ ಪಿಂಚಣಿ ದೊರೆಯುತ್ತಿಲ್ಲ ಎಂಬ ಅಹವಾಲು ಸಲ್ಲಿಸಲಾಯಿತು ಸಮಸ್ಯೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಎರಡು ವರ್ಷಗಳ ಬಳಿಕ ಸಭೆ ಆಯೋಜಿಸಲಾಗಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಕಲಚೇತನರ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಿಡಿಪಿಒ ವಿದ್ಯಾವಸ್ತ್ರದ್, SCI ನವಜೀವನ ಸೇವಾ ಸಂಘದ ಅಧ್ಯಕ್ಷ ಬೆಳ್ಳೂಟಿ ಮುನಿರಾಜು, ಅಂಧಮಕ್ಕಳ ಶಾಲೆಯ ಗೋಪಾಲ್, ಸತೀಶ್ ಜಯರಾಮ್, VRW, MRW ಹಾಗೂ ನೋಡಲ್ ಅಧಿಕಾರಿ ಲಕ್ಷ್ಮಿದೇವಮ್ಮ, ಕುಂದಲಗುರ್ಕಿ ಸಂತೋಷ್ ,
ಆರೋಗ್ಯ ಇಲಾಖೆಯ ವೈದ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now