--Ads--

ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ 

On: September 28, 2026 5:43 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ 

ತಾಂಡವಪುರ ಸೆಪ್ಟೆಂಬರ್ 28 : ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಬಾರಿ ಪ್ರತಿಭಟನೆ ನಡೆಸಿ ಪತಿ ಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿದರು

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು , ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ನಮ್ಮ ಆಕ್ಷೇಪಗಳನ್ನು ವ್ಯಕ್ತಪಡಿಸಿ ದೇಶಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಅದೇ ರೀತಿ ಈಗ ಜಿಲ್ಲಾ ಮಟ್ಟದಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದ್ದು ಚುನಾವಣಾ ಆಯೋಗವು ತನ್ನ ಸಂವಿಧಾನಾತ್ಮಕ ಸ್ವಾಯತ್ತತೆಯನ್ನು ಕಾಪಾಡಿಕೊಂಡು, ಯಾವುದೇ ರಾಜಕೀಯ ಒತ್ತಡ ಅಥವಾ ಪಕ್ಷಪಾತಕ್ಕೆ ಅವಕಾಶವಿಲ್ಲದಂತೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳ ಮೂಲಕ ಪ್ರಜಾಪ್ರಭುತ್ವದ ಮೇಲಿನ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಬೇಕು ಎಂಬುದು ನಮ್ಮ ಒತ್ತಾಯ ಎಂದು ಹೇಳಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರನ ಹಕ್ಕು ಮತ್ತು ಧ್ವನಿಗೆ ಸಮಾನ ಮೌಲ್ಯ ದೊರೆಯಬೇಕು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಚುನಾವಣಾ ಆಯೋಗದ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ಚುನಾವಣಾ ಆಯೋಗವೇ ಈ ರೀತಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದು ಅಪಾಯಕರ ಸಂಗತಿ ಎಂದು ಸಚಿವರು ತಿಳಿಸಿದರು

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣನವರು ಚುನಾವಣಾ ಆಯುಕ್ತರು ಹಾಗೂ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಅವರು ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುತ್ತಿದೆ. ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಬೇಕು ಎಂದು ಆಗ್ರಿಸಿದ ಬಸವಣ್ಣನವರು
ಚುನಾವಣಾ ಆಯೋಗವು ತನ್ನ ಸ್ವಾಯತ್ತತೆಯನ್ನು ಕಾಯ್ದುಕೊಂಡು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಯಾವುದೇ ಪಕ್ಷದ ಒತ್ತಡಕ್ಕೆ ಮಣಿಯ ಬಾರದು ಎಂದು ಹೇಳಿದರು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಅಮರನಾಥ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮೂರ್ತಿ, ನಿಕಟಪೂರ್ವ ಅಧ್ಯಕ್ಷ ಡಾ. ಬಿ.ಜೆ. ವಿಜಯ್ ಕುಮಾರ್ ಮೈಸೂರು ಜಿಲ್ಲಾ ಹಿರಿಯ ಪ್ರಧಾನ ಕಾರ್ಯದರ್ಶಿ ಎಂಸಿ ಹುಂಡಿ ಶಿವಪ್ರಸಾದ್ ಸಕಳ್ಳಿ ಬಸವರಾಜು ಎಂ ಶಿವಣ್ಣ ಸೇರಿದಂತೆ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now