ವಿಜಯ ದರ್ಪಣ ನ್ಯೂಸ್….
ಬೊಮ್ಮವಾರದ ಗಾಂಧಿ ಭವನದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ .01 :
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನವನ್ನು ದೇವನಹಳ್ಳಿ ತಾಲ್ಲೂಕು ಬೊಮ್ಮವಾರ ಗ್ರಾಮದ ಗಾಂಧಿ ಭವನದಲ್ಲಿ ಆಚರಿಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 2 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸರ್ವಧರ್ಮ, ಪ್ರಾರ್ಥನೆ, ಗಾಂಧಿ ಭಜನೆ, ಗಾಂಧಿ ಗೀತ ಗಾಯನಗಳೊಂದಿಗೆ, ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ನಾಡಿಗೆ ನೀಡಿದ ಕೊಡುಗೆಗಳ ಸ್ಮರಿಸುವ ಉಪನ್ಯಾಸದೊಂದಿಗೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.
ಕಾರ್ಯಕ್ರಮಕ್ಕೆ ಗಾಂಧಿವಾದಿಗಳು ಸಾರ್ವಜನಿಕರು ಗಾಂಧಿ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಕಟಣೆ ತಿಳಿಸಿದೆ.
ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ .01:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ
ಉದ್ದೇಶದಿಂದ, ಸರ್ಕಾರದ ಇನ್‌ಪುಟ್ ಸಬ್ಸಿಡಿ ಬರಪರಿಹಾರ ನಿರೀಕ್ಷೆಯಲ್ಲಿದ್ದು, ಜಿಲ್ಲೆಯ ಎಲ್ಲಾ 4 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಪರಿಹಾರ ಸೌಲಭ್ಯವನ್ನು ಎಫ್‌ಐಡಿ (ಫಾರ್ಮರ್ ಐಡಿ) ಹೊಂದಿರುವ ಅರ್ಹ ರೈತರಿಗೆ ಮಾತ್ರ ನೀಡಲಾಗುತ್ತದೆ.
ಜಿಲ್ಲೆಯಲ್ಲಿ ಒಟ್ಟು 5,25,904 ರೈತರಿದ್ದು ಈ ಪೈಕಿ 2,96,097 ರೈತರು (ಶೇ.56.30) ಎಫ್‌ಐಡಿ ಹೊಂದಿದ್ದಾರೆ. ಇನ್ನೂ 2,29,807 ರೈತರ ಎಫ್‌ಐಡಿ ಮಾಡಿಸಿಕೊಳ್ಳ ಬೇಕು.
ಎಫ್‌ಐಡಿ ಹೊಂದಿರದ ರೈತರು ತಮ್ಮ ಎಲ್ಲಾ ಪಹಣಿಗಳು, ಆಧಾರ್‌ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್‌ಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಪಶುಸಂಗೋಪನಾ ಇಲಾಖೆ ಅಥವಾ ಕಂದಾಯ ಇಲಾಖೆಯ ಕಚೇರಿಗೆ ಭೇಟಿ ನೀಡಿ ಎಫ್‌ಐಡಿ ಸೃಜಿಸಿಕೊಳ್ಳಬೇಕು.
ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೇ ನಂಬರ್ ಗಳಿಗೆ ಸಂಬಂಧಿಸಿದ ಎಫ್‌ಐಡಿಗೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಎಫ್‌ಐಡಿಗೆ ಜೋಡಣೆಯಾಗದಿರುವ ಸರ್ವೇ ನಂಬರ್‌ಗಳಿದ್ದಲ್ಲಿ ಸಂಬಂಧಿಸಿದ ಇಲಾಖೆಯ ಮೂಲಕ ಅವುಗಳನ್ನು ಕೂಡಲೇ ಎಫ್‌ಐಡಿಗೆ ಜೋಡಿಸಿಕೊಳ್ಳಬೇಕು.
ಬರ ಪರಿಹಾರ ಸೌಲಭ್ಯ ಪಡೆಯುವಲ್ಲಿ ಯಾವುದೇ ರೀತಿಯ ವಿಳಂಬ ಉಂಟಾಗದಂತೆ ಜಿಲ್ಲೆಯ ರೈತರು ಈ ಪ್ರಕ್ರಿಯೆಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ .01 :
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಅ. 31 ರೊಳಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್ ದೊಡ್ಡಬಳ್ಳಾಪುರ ಕಚೇರಿ ದೂರವಾಣಿ : 080-22860495 ಯನ್ನು ಸಂಪರ್ಕಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









