--Ads--

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಟೋಬರ್-2 ರಂದು ಶಿಡ್ಲಘಟ್ಟಕ್ಕೆ : ಸೀಕಲ್ ರಾಮಚಂದ್ರಗೌಡ

On: October 1, 2026 4:50 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಟೋಬರ್-2 ರಂದು ಶಿಡ್ಲಘಟ್ಟಕ್ಕೆ : ಸೀಕಲ್ ರಾಮಚಂದ್ರಗೌಡ

ಶಿಡ್ಲಘಟ್ಟ : ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ , ಪಕ್ಷದ ಸಂಘಟಿಸುವ ವಿಚಾರವಾಗಿ ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಟೋಬರ್-2 ರಂದು ಶಿಡ್ಲಘಟ್ಟಕ್ಕೆ
ಆಗಮಿಸಲಿದ್ದು ಚರ್ಚೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾದ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ನಗರದ “ಬಿಜೆಪಿ ಸೇವಾಸೌಧ” ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ನಗರ ಸಮೀಪದ ಹಂಡಿಗನಾಳ ಗಡಿಭಾಗದಲ್ಲಿ ಬಿ.ವೈ.ವಿಜಯೇಂದ್ರಗೆ ಸ್ವಾಗತ ಕೋರಲಿದ್ದು, ನಗರದ ಕೋಟೆ ವೃತ್ತದ ಶ್ರೀಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದ ಕಾಲ್ನಡಿಗೆ ಮೂಲಕ ‘ಬಿಜೆಪಿ ಸೇವಾಸೌಧ’ ಕಚೇರಿಗೆ ಕರೆತರಲಾಗುವುದು ಅಲ್ಲಿ ರೈತರ ಜತೆ ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ ಹಾಗೂ ರಾಜಕೀಯ ಜೀವನದ 25 ವರ್ಷಗಳು ತುಂಬಿದ ಅಂಗವಾಗಿ ನಡೆಯುತ್ತಿರುವ ಸೇವಾ ಮಾಸ ಅಂಗವಾಗಿ ವಾಸವಿ ಶಾಲೆಯಲ್ಲಿ ನಡೆಯುವ ರಂಗೋಲಿ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮದಲ್ಲಿಯೂ ಅವರು ಭಾಗವಹಿಸಲಿದ್ದಾರೆ.

ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗು ರೈತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್‌ ಆನಂದಗೌಡ, ನಗರ ಮಂಡಲ ಅಧ್ಯಕ್ಷ ದೇವರಾಜ್, ಮುಖಂಡರಾದ ಕೆ.ಸುರೇಂದ್ರಗೌಡ, ಕನಕಪ್ರಸಾದ್ ರಾಮಕೃಷ್ಣಪ್ಪ ,ಕೊತ್ತನೂರು ರವಿಚಂದ್ರ ಮುಂತಾದವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now