--Ads--

ಮೈಸೂರು ದಸರಾ ಉದ್ಘಾಟನಾ ಸಮಾರಂಭಕ್ಕೆ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ , ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಮಂತ್ರಣ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ 

On: October 1, 2026 5:09 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮೈಸೂರು ದಸರಾ ಉದ್ಘಾಟನಾ ಸಮಾರಂಭಕ್ಕೆ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ , ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಮಂತ್ರಣ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ 

ತಾಂಡವಪುರ ಅಕ್ಟೋಬರ್ ಒಂದುರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರು ಬೆಂಗಳೂರಿನ ಅವರು ನಿವಾಸದಲ್ಲಿ ಭೇಟಿಯಾಗಿ ವಿಶ್ವವಿಖ್ಯಾತ, ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಬರಬೇಕು ಎಂದು ಆಮಂತ್ರಣ ನೀಡಿ ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿದರು

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸುವಂತೆ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ಪತ್ರಿಕೆ ನೀಡಿ ಆತ್ಮೀಯವಾಗಿ ಸ್ವಾಗತಿಸಿ ಗಣ್ಯರನ್ನು ಸನ್ಮಾನಿಸಿದರು

ನಾಡಹಬ್ಬ ಮೈಸೂರು ದಸರಾ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿ, ಪರಂಪರೆ, ಕಲೆ, ಸಾಹಿತ್ಯ ಹಾಗೂ ಜನಪದ ವೈಭವವನ್ನು ಇಡೀ ಜಗತ್ತಿಗೆ ಪರಿಚಯಿಸುವ ಹೆಮ್ಮೆಯ ಸಾಂಸ್ಕೃತಿಕ ಸಂಭ್ರಮವಾಗಿದೆ. ಈ ಬಾರಿಯೂ ನಮ್ಮ ದಸರಾವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ. ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ , ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್‌ ಸಿಎಒ ಎಸ್. ಯುಕೇಶ್ ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಆರ್. ಐಶ್ವರ್ಯ ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now