--Ads--

ಮುಗಬಾಳ ವಿದ್ಯುತ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

On: October 2, 2026 12:52 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಮುಗಬಾಳ ವಿದ್ಯುತ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದ ಸಹಾಯಕ ವಿದ್ಯುತ್ ಅಭಿಯಂತರರ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಜೀವನ ಮತ್ತು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರು ಅನುಸರಿಸಿದ ಸತ್ಯ, ಅಹಿಂಸೆ, ಶಾಂತಿ, ಸರಳತೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕಿರಿಯ ವಿದ್ಯುತ್ ಅಭಿಯಂತರ ಇಂಜಿನಿಯರ್ ನಿಂಗೇಗೌಡ ಟಿ.ಎಂ. ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಜೀವನವು ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿದೆ. ಸತ್ಯ ಮತ್ತು ಅಹಿಂಸೆಯ ಮಾರ್ಗದ ಮೂಲಕವೂ ದೊಡ್ಡ ಬದಲಾವಣೆಯನ್ನು ತರಬಹುದು ಎಂಬುದನ್ನು ಗಾಂಧೀಜಿಯವರ ಬದುಕು ನಮಗೆ ತೋರಿಸಿಕೊಟ್ಟಿದೆ ಎಂದು ಹೇಳಿದರು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಸಹಾಯಕ ಇಂಜಿನಿಯರ್ ಶಂಕರ್ ಕುಮಾರ್ ಜಿ. ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಗಾಂಧೀಜಿಯವರ ಆದರ್ಶಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ. ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ಸ್ವಚ್ಛತೆ, ಸರಳ ಜೀವನ ಹಾಗೂ ಸಮಾಜದ ಬಗ್ಗೆ ಕಾಳಜಿ ಇವುಗಳನ್ನು ನಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು.

ಗಾಂಧೀಜಿಯವರ ಕನಸಿನ ಸ್ವಚ್ಛ, ಶಾಂತಿಯುತ ಮತ್ತು ಸ್ವಾವಲಂಬಿ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯುತ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now