ವಿಜಯ ದರ್ಪಣ ನ್ಯೂಸ್…..
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ
ಮಹಾತ್ಮಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ

ಶಿಡ್ಲಘಟ್ಟ : ಮಹಾತ್ಮ ಗಾಂಧಿ ಅವರ ದೇಶಪ್ರೇಮ ಮತ್ತು ಕರ್ತವ್ಯನಿಷ್ಠೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು
ತಹಶೀಲ್ದಾರ್ ಗಗನಸಿಂಧು ತಿಳಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ
ಮಹಾತ್ಮಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು
ಆಚರಿಸುವ ಮೂಲಕ ಅವರು ಮಾತನಾಡಿದರು.
ಅವರ ಸರಳ ಜೀವನ, ಉನ್ನತ ಆದರ್ಶಗಳು ಇಂದಿಗೂ ಎಲ್ಲರಿಗೂ ಮಾದರಿಯಾಗಿವೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಾಮಾಣಿಕತೆ, ಶಿಸ್ತು ಹಾಗೂ ಸರಳತೆಗೆ ಹೆಸರಾದ ನಾಯಕರಾಗಿದ್ದರು ಎಂದು ಹೇಳಿದರು.
ಈ ವೇಳೆ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಜಿ.ಅಮೃತ,
ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿ ಹಾಗು ತಾಲ್ಲೂಕು ಕಚೇರಿಯ ಸಿಬ್ಬಂದಿ ಪಾಲ್ಗೊಂಡಿದ್ದರು.










