--Ads--

ಸಮೇತನಹಳ್ಳಿ ಸರ್ಕಾರಿ ಶಾಲೆಗೆ ₹80 ಲಕ್ಷ ಸಿಎಸ್‌ಆರ್ ನೆರವು

On: October 3, 2026 4:25 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಸಮೇತನಹಳ್ಳಿ ಸರ್ಕಾರಿ ಶಾಲೆಗೆ ₹80 ಲಕ್ಷ ಸಿಎಸ್‌ಆರ್ ನೆರವು

ತಾವರೆಕೆರೆ : ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಫ್ಲೋಸರ್ವ್’ ಹಾಗೂ ‘ಯುನೈಟೆಡ್ ವೇ ಬೆಂಗಳೂರು ಸಹಯೋಗದಲ್ಲಿ 80 ಲಕ್ಷ ರೂಗಳ  6  ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ತಮ್ಮ ಆದ್ಯತೆಯಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಲಿವೆ ಎಂದು ಹೇಳಿದರು.

ಕ್ರೀಡಾ ಪ್ರತಿಭೆಗಳಿಗೆ ಅಭಿನಂದನೆ ಇದೇ ವೇಳೆ ಇತ್ತೀಚೆಗೆ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ವಿಜೇತರಾದ ಸಮೇತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.

ಕ್ರೀಡೆಯಲ್ಲಿ ವಿದ್ಯಾರ್ಥಿಗಳು ತೋರಿದ ಸಾಧನೆಯನ್ನು ಶ್ಲಾಘಿಸಿದ ಶಾಸಕ ಶರತ್ ಬಚ್ಚೇಗೌಡ್ರು ಶಿಕ್ಷಣದ ಜತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮುಖಂಡರಾದ ಸಮೇತನಹಳ್ಳಿ ಸೊಣ್ಣಪ್ಪ , ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಯಲ್ಲಪ್ಪ, ಹೊಸಕೋಟೆ ಟಿಎಪಿಸಿಎಂಎಸ್ ನಿರ್ದೇಶಕ ಆನಂದ ಚಾರಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now