--Ads--

ಮೈಸೂರಿನ ಗೋಕುಲಂನಲ್ಲಿ ಯುವಕನ ಭೀಕರವಾಗಿ ಕೊಲೆ

On: October 3, 2026 4:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮೈಸೂರಿನ ಗೋಕುಲಂನಲ್ಲಿ ಯುವಕನ ಭೀಕರವಾಗಿ ಕೊಲೆ

ತಾಂಡವಪುರ.03: ಮೈಸೂರು ನಗರದಲ್ಲಿ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಗೋಕುಲಂ ಬಡಾವಣೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬನನ್ನು 6 ಜನರ ಗುಂಪೊಂದು ಸಾರ್ವಜನಿಕವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.

ಮೃತ ಯುವಕನ ಗುರುತು ಪತ್ತೆ: ಹತ್ಯೆಯಾದ ವ್ಯಕ್ತಿಯನ್ನು ಮೈಸೂರು ನಿವಾಸಿ ಟಿ ಮಹೇಶ್ (40) ಎಂದು ಗುರುತಿಸಲಾಗಿದೆ.

ಗೋಕುಲಂನಲ್ಲಿ ಸಾರ್ವಜನಿಕವಾಗಿ 6 ಜನರ ಗುಂಪು ಮಾರಕಾಸ್ತ್ರಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹಾಡಹಗಲೇ ಜನನಿಬಿಡ ಪ್ರದೇಶದಲ್ಲೇ ಈ ಕೃತ್ಯ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ

ಪೊಲೀಸರ ಭೇಟಿ: ವಿಷಯ ತಿಳಿಯುತ್ತಿದ್ದಂತೆ ವಿ.ವಿ. ಪುರಂ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಹತ್ಯೆಗೆ ಕಾರಣವೇನು?
ಪ್ರಾಥಮಿಕ ಮಾಹಿತಿ ಪ್ರಕಾರ ಮಹಿಳೆ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿದೆಯಾ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳ ಪತ್ತೆಗಾಗಿ ಪೊಲೀಸರು 2 ವಿಶೇಷ ತಂಡಗಳನ್ನು ರಚಿಸಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

WhatsApp

Join Now

Telegram

Join Now

Instagram

Join Now