ವಿಜಯ ದರ್ಪಣ ನ್ಯೂಸ್…..
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ

ತಾಂಡವಪುರ ಅಕ್ಟೋಬರ್ 3 ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮೈಸೂರು ಜಿಲ್ಲಾಡಳಿತ ವತಿಯಿಂದ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದರು.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಕಾರ್ಯಕ್ರಮಗಳು ಬಹಳ ಅಚ್ಚುಕಟ್ಟಾಗಿ ಹೊಸತರದ ವಿನೂತನ ಕಾರ್ಯಕ್ರಮಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ದಸರಾ ಕಾರ್ಯಕ್ರಮಗಳು ಶುರುವಾಗಿದ್ದು ದಸರಾ ಉದ್ಘಾಟನೆ ಕಾರ್ಯಕ್ರಮಗಳಿಗೆ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಮೈಸೂರು ಜಿಲ್ಲೆಯವರೆ ಆದ ಸಿದ್ದರಾಮಯ್ಯ ಅವರನ್ನು ಮೈಸೂರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಭೇಟಿ ಮಾಡಿ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಹಾಗೂ ಮಹಿಳಾ ಅಧಿಕಾರಿಗಳು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು











