ವಿಜಯ ದರ್ಪಣ ನ್ಯೂಸ್……
ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರ ತಂಡ ಆಯ್ಕೆ

ಶಿಡ್ಲಘಟ್ಟ : ಹೆಣ್ಣು ಮಕ್ಕಳು ಇಂದು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಸರ್ಕಾರವೂ ಕ್ರೀಡಾಪಟುಗಳಿಗೆ ಹಲವು ಪ್ರೋತ್ಸಾಹಗಳನ್ನು ನೀಡುತ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು
ಮಾಜಿ ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಶ್ರೀವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು
ಕೈವಾರದಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಿಡ್ಲಘಟ್ಟದ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಹಿನ್ನೆಲೆ
ಬಾಲಕಿಯರ ವಾಲಿಬಾಲ್ ತಂಡದ ಕ್ರೀಡಾಪಟುಗಳನ್ನು ವಾಸವಿ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಿ ಅವರು ಮಾತನಾಡಿದರು.
ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ಅದರಲ್ಲೂ ಬಾಲಕಿಯರ ವಾಲಿಬಾಲ್ ತಂಡ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ತಾಲ್ಲೂಕಿನ ಜನತೆ ಹೆಮ್ಮೆಪಡುವ ವಿಚಾರವಾಗಿದೆ ಎಂದು ಹೇಳಿದರು.
ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಸದೃಢತೆ ಹೆಚ್ಚುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣಗಳು ಬೆಳೆಯುತ್ತವೆ ಎಂದರು.
ಈ ವೇಳೆ ಶಾಲೆಯ ಅಧ್ಯಕ್ಷ ಮಹೇಶ್ ಬಾಬು ಅದ್ಯಕ್ಷತೆ ವಹಿಸಿದ್ದರು,ಆಡಳಿತಾಧಿಕಾರಿ ರೂಪಸಿ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಪದಕ, ಪ್ರಶಸ್ತಿ ಹಾಗೂ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಾಸವಿ ಸಂಸ್ಥೆಯ ಮಾಜಿ ಅಧ್ಯಕ್ಷ ಟಿಎಕೆ ಶೆಟ್ಟಿ, ನಿರ್ದೇಶಕರಾದ ರಾಜೇಶ್, ಕೆಎಲ್‌ವಿ ಪ್ರಸಾದ್, ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷೆ ಜಯಶ್ರೀಕೇದಾರ್, ಸರಳರಾಜ್, ಗಜಲಕ್ಷ್ಮಿ,ರಾಣಿ,ಭಾರತಿ ರಾಜೇಶ್,ಮಮತಾ ,ಪ್ರಾಂಶುಪಾಲ ಡಾ.ಶಿವಕುಮಾರ್, ಮುಖ್ಯಶಿಕ್ಷಕ ಸಿ.ಕೆ.ರವಿ, ರೇಷ್ಮೆ ಉದ್ಯಮದಾರ ಸಂಜೀವಪ್ಪ ,ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.










