--Ads--

ಬಳುವನಹಳ್ಳಿ ಗ್ರಾಮದಲ್ಲಿ ಜಿಕೆವಿಕೆ ವಿದ್ಯಾರ್ಥಿಗಳಿಂದ ಕೃಷಿ ಕಲರವ

On: October 8, 2026 5:50 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಬಳುವನಹಳ್ಳಿ ಗ್ರಾಮದಲ್ಲಿ ಜಿಕೆವಿಕೆ ವಿದ್ಯಾರ್ಥಿಗಳಿಂದ ಕೃಷಿ ಕಲರವ

ಶಿಡ್ಲಘಟ್ಟ : ಕೃಷಿ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರೈತರು ಹಾಗೂ ಕೃಷಿ ವಿದ್ಯಾರ್ಥಿಗಳ ನಡುವಿನ ಸಂವಾದಗಳು ಸಹಕಾರಿಯಾಗಲಿವೆ ಎಂದು ತಹಶೀಲ್ದಾರ್ ಎನ್. ಗಗನಸಿಂಧು ತಿಳಿಸಿದರು.

ತಾಲ್ಲೂಕಿನ ಜಂಗಮಕೋಟೆ ಹೋಬಳಿಯ
ಬಳುವನಹಳ್ಳಿ ಗ್ರಾಮದಲ್ಲಿ ಜಿಕೆವಿಕೆ ವಿದ್ಯಾರ್ಥಿಗಳು ಆಯೋಜಿಸಿದ್ದ “ಕೃಷಿ ಕಲರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರದ ಬೆಳವಣಿಗೆಗೆ ರೈತರ ಜ್ಞಾನ, ಆಧುನಿಕ ಕೃಷಿ ಪದ್ಧತಿಗಳ ಅಳವಡಿಕೆ ಹಾಗೂ ಕೃಷಿ ಸಂಬಂಧಿತ ಮಾಹಿತಿಗಳ ವಿನಿಮಯ ಮಹತ್ವದ ಪಾತ್ರ ವಹಿಸುತ್ತವೆ
ರೈತರ ಅಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಪ್ರಗತಿಗೆ
ಸದಾ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ವಿದ್ಯಾರ್ಥಿಗಳು ಬೆರೆತು ಕೃಷಿ ಕ್ಷೇತ್ರದ ವಾಸ್ತವಿಕ ಪರಿಸ್ಥಿತಿಯನ್ನು ಅರಿತುಕೊಳ್ಳಲು ಇಂತಹ ಕಾರ್ಯಕ್ರಮಗಳು ಅವಕಾಶ ಕಲ್ಪಿಸುತ್ತವೆ ಎಂದು ನುಡಿದರು.

ಈ ವೇಳೆ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಮಾಹಿತಿ ವಿನಿಮಯ ನಡೆಯಿತು,ರೈತರೊಂದಿಗೆ ಸಂವಾದ ನಡೆಸಿ, ಕೃಷಿ ಚಟುವಟಿಕೆಗಳು, ರೈತರ ಸಮಸ್ಯೆಗಳು ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಕೆವಿಕೆ ವಿದ್ಯಾರ್ಥಿಗಳು ,ಈ ಬಾಗದ ರೈತರು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now