ವಿಜಯ ದರ್ಪಣ ನ್ಯೂಸ್……
ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 13 ,:
ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವದರಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದರು.
ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಉಪನ್ಯಾಸ, ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಇರಲಿದ್ದು ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಎಡಿಸಿ ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪಾಂಡುರಂಗ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಟೇಕ್ವಾಂಡೋ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವಿಷ್ಣು ಚರಣ್ ಟೇಕ್ವಾಂಡೋ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ
ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಮುಖ್ಯ ಶಿಕ್ಷಕ ಮಲ್ಲಯ್ಯ, ಅಧ್ಯಾಪಕರು ಸಿಬ್ಬಂದಿ ವರ್ಗ,ಶಾಲಾ ಎಸ್.ಡಿ.ಎಂ.ಸಿ ಸಮಿತಿಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಯ ಪೋಷಕರು ಅಭಿನಂದಿಸಿದ್ದಾರೆ










