ವಿಜಯ ದರ್ಪಣ ನ್ಯೂಸ್…..
ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹಿಲ್ಸ್ ಸ್ಪೋರ್ಟ್ಸ್ ಅಕಾಡೆಮಿಗೆ ಬೆಳ್ಳಿ ಪದಕ

ದೊಡ್ಡಬಳ್ಳಾಪುರ: ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಿಲ್ಸ್ ಸ್ಪೋರ್ಟ್ಸ್ ಅಕಾಡೆಮಿಯ ಬ್ಯಾಡ್ಮಿಂಟನ್ ಪುರುಷರ ತಂಡವು ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದೆ.
ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ತಂಡಗಳ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಂಡವು ದ್ವಿತೀಯ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದೆ.
ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಂಡವು ಬೆಳ್ಳಿ ಪದಕ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ತಂಡದ ಆಟಗಾರರಾದ ರಜತ್, ಶ್ರೀಧರ್, ದಿಲೀಪ್ ಮತ್ತು ಸುದರ್ಶನ್ ಎಂ. ಶೆಟ್ಟಿ ಅವರು ತಮ್ಮ ಕ್ರೀಡಾ ಕೌಶಲ್ಯ ಹಾಗೂ ತಂಡದ ಒಗ್ಗಟ್ಟಿನಿಂದ ಈ ಸಾಧನೆಗೆ ಕಾರಣರಾಗಿದ್ದಾರೆ.
ಈ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ ಆರ್., ಕ್ರೀಡಾಂಗಣದ ಮೇಲ್ವಿಚಾರಕರಾದ ವಿಶ್ವಾಸ್ ಹಾಗೂ ಹಿಲ್ಸ್ ಸ್ಪೋರ್ಟ್ಸ್ ಅಕಾಡೆಮಿಯ ಸಂಸ್ಥಾಪಕರಾದ ಚೇತನ್, ಶರತ್ ಮತ್ತು ಶ್ರೀನಾಥ್ ಅವರು ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದರು.
ಈ ಸಾಧನೆಯು ದೊಡ್ಡಬಳ್ಳಾಪುರ ತಾಲೂಕಿನ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ವಿಷಯವಾಗಿದ್ದು, ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಬೆಂಗಳೂರು ಗ್ರಾಮಾಂತ ಜಿಲ್ಲೆ ಅಕ್ಟೋಬರ್14 :
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್, ಎಸ್ಎಸ್ಸಿ, ಹಾಗೂ ಆರ್ಆರ್ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಕಾಲದ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತರು ಅ. 19 ರೊಳಗೆ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ವಿವಿ ಕುಲಸಚಿವ ಪ್ರೊ. ಎಂ.ಪಿ.ಸದಾಶಿವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











