ವಿಜಯ ದರ್ಪಣ ನ್ಯೂಸ್…
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ರೈತ ದಸರಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಸಚಿವರು

ತಾಂಡವಪುರ ಅಕ್ಟೋಬರ್ 16 ವಿಶ್ವವಿಖ್ಯಾತ ಮೈಸೂರು ದಸರಾ ನಾಡಹಬ್ಬದ ಪ್ರಯುಕ್ತ ಮೈಸೂರಿನ ಜೆ.ಕೆ. ಮೈದಾನದಲ್ಲಿ ಕೃಷಿ ಇಲಾಖೆ ಹಾಗೂ ಮೈಸೂರುಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ‘ರೈತ ದಸರಾ’ ಕಾರ್ಯಕ್ರಮ ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯ ರವರು ಉದ್ಘಾಟಿಸಿ ಹಾಗೂ ನಾಡಿನ ಬೆನ್ನೆಲುಬಾದ ರೈತ ರೊಂದಿಗೆ ಬೆರೆಯಲು ಸಂತಸ ವ್ಯಕ್ತಪಡಿಸಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು
ಮಹಾತ್ಮ ಗಾಂಧೀಜಿಯವರು ಹೇಳಿದಂತೆ ನಿಜವಾದ ಭಾರತ ಇರುವುದು ಗ್ರಾಮೀಣ ಪ್ರದೇಶಗಳಲ್ಲಿ, ಹಾಗಾಗಿ ನಮ್ಮ ಸರ್ಕಾರ ರೈತರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ದೇಶ ಎಷ್ಟೇ ಅಭಿವೃದ್ಧಿ ಹೊಂದಲಿ, ಕೈಗಾರಿಕೆಗಳು ಎಷ್ಟೇ ಬೆಳೆಯಲಿ, ಅನ್ನದಾತ ರೈತ ಬೆಳೆ ಬೆಳೆಯಲೇಬೇಕು ಆಗ ಮಾತ್ರ ನಾವು ಬದುಕಲು ಸಾಧ್ಯ ಎಂದು ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರು ಹೇಳಿದರು
ನಮ್ಮ ದೇಶದಲ್ಲಿ ಶೇಕಡಾ 46ರಷ್ಟು ಉದ್ಯೋಗ ಸೃಷ್ಟಿಯಾಗುವುದು ಕೃಷಿಯಿಂದಲೇ ಮತ್ತು ಶೇಕಡಾ 18ರಷ್ಟು ಜಿಡಿಪಿ (GDP) ಕೃಷಿಯಿಂದ ಬರುತ್ತದೆ ಹಾಗಾಗಿ ರಾಷ್ಟ್ರದ ಆರ್ಥಿಕತೆಯಲ್ಲಿ ಕೃಷಿಗೆ ತನ್ನದೇ ಆದ ಮಹತ್ವವಿದೆ ಎಂದು ತಿಳಿಸಿದ ಅವರು
ರಾಷ್ಟ್ರಕವಿ ಕುವೆಂಪು ಹೇಳಿದಂತೆ ಯಾವುದೇ ಸರ್ಕಾರ ಅಥವಾ ಪಕ್ಷ ಅಧಿಕಾರಕ್ಕೆ ಬಂದರೂ ಕೃಷಿ ಕಾಯಕ ನಿರಂತರವಾಗಿ ನಡೆಯುತ್ತಲೇ ಇರಬೇಕು, ಈ ಹಿನ್ನೆಲೆಯಲ್ಲಿ ಕೃಷಿಕರೇ ನಿಜವಾದ ಕಾಯಕ ಯೋಗಿಗಳು ಎಂದು ಅವರ ಮಾತುಗಳನ್ನು ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡರು
ಈ ಬಾರಿ ರಾಜ್ಯ ಸರ್ಕಾರದ ವತಿಯಿಂದ ರೈತರಿಗೆ ಮೊದಲ ಹಂತದಲ್ಲಿ 1250 ಕೋಟಿ ರೂಪಾಯಿ ಬರ ಪರಿಹಾರವನ್ನು ನೀಡಲಾಗುತ್ತಿದೆ, ಇದರೊಂದಿಗೆ ಕೇಂದ್ರ ಸರ್ಕಾರವೂ ಕೂಡ ಸೂಕ್ತ ನೆರವು ನೀಡಬೇಕು ಹಾಗೂ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಇದೆ ವೇಳೆ ಸಚಿವರು ಒತ್ತಾಯಿಸಿದರು
ಈ ಕಾರ್ಯಕ್ರಮದ ಅಂಗವಾಗಿ 40 ಕೃಷಿ ಮಳಿಗೆಗಳನ್ನು ಉದ್ಘಾಟಿಸಲಾಗಿದ್ದು, ಆಧುನಿಕ ಕೃಷಿ ತಂತ್ರಜ್ಞಾನದ ಕುರಿತು ಸಾಂಸ್ಕೃತಿಕ ತಂಡಗಳು ರೈತರಲ್ಲಿ ಅರಿವು ಮೂಡಿಸುವ ಕಾರ್ಯ ವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಸಚಿವರು ಸೂಚನೆ ನೀಡಿದರು
ವಿಶೇಷವಾಗಿ ಹಳ್ಳಿಕಾರ್ ಹಸು ತಳಿ ಪ್ರದರ್ಶನ ಹಾಗೂ ಹಾಲು ಕರೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ಇದರಲ್ಲಿ ಉತ್ಸಾಹದಿಂದ ಭಾಗವಹಿಸಬೇಕೆಂದು ತಿಳಿಸಿದರು
ರೈತರಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮತ್ತು ಸಹಕಾರ ನೀಡುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು
ಇದೇ ಸಂದರ್ಭದಲ್ಲಿ “ಹೊನ್ನಾರು” ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿಜೇತ ರೈತರು ಹಾಗೂ ಜಿಲ್ಲೆಯ ಪ್ರಗತಿಪರ ರೈತ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು
ಈ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್. ಬಸವಂತಪ್ಪ, ಪಿ.ಎಂ. ನರೇಂದ್ರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ, ರೈತ ದಸರಾ ಉಪ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಡಿ.ಎಂ, ಕಾರ್ಯಾಧ್ಯಕ್ಷ ಕೆ.ಎಚ್. ರವಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಂತಾದವರು ಹಾಜರಿದ್ದರು










