--Ads--

ಪ್ರತಿ ಮನೆ ಮೇಲೆ ಕನ್ನಡ ಬಾವುಟ ಹಾರಲಿ

On: October 18, 2026 12:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪ್ರತಿ ಮನೆ ಮೇಲೆ ಕನ್ನಡ ಬಾವುಟ ಹಾರಲಿ

ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅ.18: ನಗರದ ಪ್ರತಿಯೊಂದು ಮನೆಯ ಮೇಲೂ ಕನ್ನಡದ ಬಾವುಟ ಹಾರಿಸುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸಬೇಕು. ಶಾಲಾ ವಿದ್ಯಾರ್ಥಿಗಳಿಗೆ ಕನ್ನಡದ ಸಾಹಿತಿಗಳು, ಬರಹಗಾರರು ಹಾಗೂ ಕವಿಗಳ ಪರಿಚಯ ಮಾಡಿಕೊಡುವ ಪುಸ್ತಕಗಳನ್ನು ಈ ಬಾರಿಯ ರಾಜ್ಯೋತ್ಸವದ ಸಂದರ್ಭದಲ್ಲಿ ವಿತರಿಸಬೇಕು ಎಂದು ನಾಡು- ನುಡಿ ಚಿಂತಕರು ಒತ್ತಾಯಿಸಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮಾತನಾಡಿದರು.

ನವೆಂಬರ್ ತಿಂಗಳಿಗೆ ಮಾತ್ರ ಕನ್ನಡಿಗರೆಂದು ಕರೆಸಿಕೊಳ್ಳುವ ಬದಲು, ವರ್ಷವಿಡೀ ಕನ್ನಡದ ಬಗ್ಗೆ ಜಾಗೃತರಾಗಿರಬೇಕಾದ ಅನಿವಾರ್ಯತೆ ಪ್ರಸ್ತುತ ಸಂದರ್ಭದಲ್ಲಿ ಸೃಷ್ಟಿಯಾಗಿದೆ. ಅನ್ಯಭಾಷಿಕರು ದೊಡ್ಡ ಪ್ರಮಾಣದಲ್ಲಿ ವಲಸೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡದ ವಾತಾ ವರಣವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಾಧಕರ ಆಯ್ಕೆ ಸಮಿತಿಯಲ್ಲೂ ಬದಲಾವಣೆ ತರಬೇಕು. ನೂತನ ಪದಾಧಿ ಕಾರಿಗಳು ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸುವ ಮೂಲಕ ಪಾರದರ್ಶಕವಾಗಿ ಸಾಧಕರ ಆಯ್ಕೆ ನಡೆಯುವಂತೆ ಮಾಡ ಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

ಹಾಗೂ ತಹಶೀಲ್ದಾರ್ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಡಾ. ಮಲ್ಲಪ್ಪ ಯರಗೋಳ ಮಾತನಾಡಿ, ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಯಲು ಪ್ರದೇಶದ ಬದಲಾಗಿ ಡಾ. ರಾಜಕುಮಾರ್ ಕಲಾಮಂದಿರ ದಲ್ಲಿ ವೇದಿಕೆ ಕಾರ್ಯಕ್ರಮ ಸೂಕ್ತ ಎಂದರು. ತಾಯಿ ಭುವನೇಶ್ವರಿ ಮೆರವಣಿಗೆಯನ್ನ ತಾಲ್ಲೂಕು ಕಚೇರಿ ಬಳಿಯಿಂದ ಪ್ರಾರಂಭಿಸಿ ನಗರದ ಪ್ರಮುಖ ರಸ್ತೆ ಕಲಾ ತಂಡಗಳೊಂದಿಗೆ ಸಂಚರಿಸಿ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ಒಪ್ಪಿಗೆ ವ್ಯಕ್ತ ವಾಯಿತು.

ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ನಾಡು-ನುಡಿಗೆ ಶ್ರಮಿಸಿದ ಸಾಧಕರನ್ನು ಅಭಿನಂದಿಸುವ ಹಿನ್ನೆಲೆಯಲ್ಲಿ ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಸಾಧನೆಗಳ ಕುರಿತ ಸಂಪೂರ್ಣ ಮಾಹಿತಿಯೊಂದಿಗೆ ಅ.28ರೊಳಗೆ ತಾಲ್ಲೂಕು ಕಚೇ ರಿಗೆ ಅರ್ಜಿ ಸಲ್ಲಿಸಬೇಕು ಎಂದು ತಹಶೀಲ್ದಾರ್ ಡಾ. ಮಲ್ಲಪ್ಪ ಯರಗೋಳ ತಿಳಿಸಿದ್ದಾರೆ.

ಸಭೆಯಲ್ಲಿ ತಾ.ಪಂ. ಇಒ ಮಂಜುನಾಥ ಹರ್ತಿ, ಪೌರಾಯುಕ್ತ ಕಾರ್ತಿಕೇಶ್ವರ್, ಕನ್ನಡಪರ ಹೋರಾಟಗಾರರಾದ ತ.ನ. ಪ್ರಭುದೇವ, ಸಂಜೀವ ನಾಯಕ್, ರಾಜಘಟ್ಟ ರವಿ, ಪ್ರಮೀಳಾ ಮಹಾದೇವ, ಡಿ. ವೆಂಕಟೇಶ್ ಮುನಿಪಾಪಯ್ಯ, ಪರಮೇಶ್,  ವೆಂಕಟೇಶ್, ಎ. ನಂಜಪ್ಪ,ರಾಜು ಸಣ್ಣಕ್ಕಿ, ನಾಗರತ್ನಮ್ಮ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now