--Ads--

ಹದಿನಾರು ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ 

On: October 19, 2026 2:33 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಹದಿನಾರು ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ 

ತಾಂಡವಪುರ ಅಕ್ಟೋಬರ್ 19 ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕ ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹದಿನಾರು ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.ಶಿಬಿರದಲ್ಲಿ ಮಹಿಳೆಯರು ಹೆಚ್ಚಾಗಿ ಬಂದು ವೈದ್ಯರಲ್ಲಿ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುತ್ತಿರುವುದು ಕಂಡುಬಂದಿತು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಮಂಜೇಗೌಡರವರು ಮಾತನಾಡುತ್ತಾ ಹದಿನಾರು ಗ್ರಾಮದಲ್ಲಿ ಈ ರೀತಿಯ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿ ಗ್ರಾಮೀಣ ಮಹಿಳೆಯರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನಡೆಸುತ್ತಿರುವುದು ತುಂಬಾ ಶ್ಲಾಘನೀಯ ವಿಚಾರವಾಗಿದೆ. ಈ ಸೌಲಭ್ಯವನ್ನು ಎಲ್ಲಾ ಮಹಿಳೆಯರು ಸದುಪಯೋಗ ಪಡಿಸಿಕೊಂಡು ಆರೋಗ್ಯವನ್ನು ಉತ್ತಮ ಪಡಿಸಿಕೊಂಡು ಆರೋಗ್ಯವಂತ ಕುಟುಂಬವನ್ನು ಹೊಂದಬೇಕೆಂದು ಕರೆ ನೀಡಿದರು.

ಈ ಭಾಗದಲ್ಲಿ ಜನ ಸೇವೆ ಮಾಡಲು ಆಸಕ್ತಿಯುಳ್ಳ ಅಭಿಷೇಕ್ ಮಣಿಗಾರ್ ರವರಿಗೆ ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ವಿನಂತಿಸಿದರು. ಈ ನಿಟ್ಟಿನಲ್ಲಿ ಜೆಡಿಎಸ್ ಮುಖಂಡರಾಗಿರುವ ಅಭಿಷೇಕ್ ಮಣಿಗಾರ್‌ರವರು ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ತುಂಬಾ ಅಭಿನಂದಾನಾರ್ಹವಾಗಿದೆ ಎಂದು ಮಂಜೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು

ಈ ಕಾರ್ಯಕ್ರಮದಲ್ಲಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ಲೀಲಾವತಿರವರು ಭಾಗವಹಿಸಿ ಮಾತನಾಡುತ್ತಾ, ನಮ್ಮ ಕುಟುಂಬವೆಲ್ಲ ವರುಣ ಕ್ಷೇತ್ರಕ್ಕೆ ಸೇರಿರುವುದರಿಂದ ನಿಮ್ಮ ಆಶೀರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಕೇಳಿಕೊಂಡರು.

ನಮ್ಮ ಗ್ರಾಮೀಣ ಭಾಗದ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಮಹಿಳೆಯರಿಗೆ ಯಾವುದೇ ರೋಗದ ಸಮಸ್ಯೆ ಬಂದರೂ ನಾವು ಚಿಕಿತ್ಸೆ ನೀಡಲು ಸಿದ್ದರಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಜೆಡಿಎಸ್ ಮುಖಂಡರಾದ ಅಭಿಷೇಕ್ ಮಣಿಗಾರ್‌ರವರು ಮಾತನಾಡಿ ಗ್ರಾಮೀಣ ಭಾಗದ ಮಹಿಳೆಯರ ಆರೋಗ್ಯದಲ್ಲಿ ಸಾಕಷ್ಟು ಸಮಸ್ಯೆಗಳು ಕಂಡು ಬಂದರೂ ಸೂಕ್ತ ವೈದ್ಯಕೀಯ ಸೇವೆಗಳು ಸಿಗದಿರುವುದರಿಂದ ಜನರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಇದನ್ನು ಮನಗಂಡು ನಾವು ಗ್ರಾಮೀಣ ಭಾಗದಲ್ಲಿ ಮಹಿಳೆಯರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸುತ್ತಿದ್ದೇವೆ. ಇಂತಹ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮಹಿಳೆಯರಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಮಠದ ಗುರುಮಲ್ಲೇದೇವರು ಪ್ರೊಫೆಸರ್, ಬೊಕ್ಕಳ್ಳಿ ಸುಬ್ಬಪ್ಪ, ನಾಡಗೌಡರ ಸಿದ್ದಪ್ಪ ಡಾ.ಎಸ್ ರವಿಕುಮಾರ್, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಜಿ ಲೀಲಾವತಿ, ಗ್ರಾ.ಪಂ ಮಂಜಿ ಅಧ್ಯಕ್ಷ ಅಭಿ, ಮಾಜಿ ಗ್ರಾಪಂ ಅಧ್ಯಕ್ಷ ಬಸವಣ್ಣಣ್ಣ, ಪ್ರಮಥ,ಗ್ರಾಮದ ಮುಖಂಡ ಶಿವಣ್ಣ, , ಎ.ಪಿ.ಎಂ.ಸಿ ಸದಸ್ಯ ಶಾಂಭೌಮೂರ್ತಿ, ರಾಜಣ್ಣ, ಜಿ.ಮರಳ್ಳಿ ರೇವಣ್ಣ, ಕುಮಾರ್, ಶೇಖರ್, ಸತೀಶ, ಲೋಕೇಶ, ಮಹೇಶ ಮುಳ್ಳೂರು, ಶೇಖರ್ ಮುಳ್ಳೂರು, ಸೇರಿದಂತೆ ಹದಿನಾರು ಸುತ್ತ ಮುತ್ತಲ ಗ್ರಾಮಗಳ ಸಾವಿರಾರು ಮಹಿಳೆಯರು ಹಾಗೂ ಮುಖಂಡರುಗಳು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು

ವರದಿ ಟೀಕೆ ಬಸವರಾಜು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳು ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳಬೇಕು :ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಗಳಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ

ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ಅವರಿಗೆ 2025 ನೇ ಸಾಲಿನ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪ್ರಧಾನ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಗಾಂಧಿ ಸ್ಪರ್ಶಿಸಿದ ನೆಲವನ್ನು ಸಂರಕ್ಷಿಸಿ, ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು: ಶಾಸಕ ದರ್ಶನ್ ದೃವನಾರಾಯಣ್

ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ