--Ads--

ಮುಗಬಾಳ ಬೆಸ್ಕಾಂ ಕಚೇರಿಯಲ್ಲಿ ಭಕ್ತಿಭಾವದಿಂದ ದಸರಾ ಆಚರಣೆ

On: October 21, 2026 5:41 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮುಗಬಾಳ ಬೆಸ್ಕಾಂ ಕಚೇರಿಯಲ್ಲಿ ಭಕ್ತಿಭಾವದಿಂದ ದಸರಾ ಆಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದ ಸಹಾಯಕ ವಿದ್ಯುತ್ ಅಭಿಯಂತರರ ಕಚೇರಿಯಲ್ಲಿ ನಾಡಹಬ್ಬ ದಸರಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ದಸರಾ ಹಬ್ಬದ ಪ್ರಯುಕ್ತ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಬೆಸ್ಕಾಂ ನೌಕರರಿಗೆ ಸಿಹಿ ವಿತರಿಸಿ, ಎಲ್ಲ ಸಿಬ್ಬಂದಿಗೂ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮವು ಘಟಕದ ಕಿರಿಯ ಇಂಜಿನಿಯರ್ ನಿಂಗೇಗೌಡ ಟಿ.ಎಂ. ಹಾಗೂ ಸಹಾಯಕ ಇಂಜಿನಿಯರ್ ಶಂಕರ್ ಕುಮಾರ್ ಜಿ. ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಚೇರಿಯ ಸಹಾಯಕ ಇಂಜಿನಿಯರ್ ನಿಂಗೇಗೌಡ ಅವರು, “ಬೆಸ್ಕಾಂ ನೌಕರರು ಸಾರ್ವಜನಿಕರಿಗೆ ವಿದ್ಯುತ್ ಸೇವೆ ಒದಗಿಸುವ ನಿಟ್ಟಿನಲ್ಲಿ ಹಗಲು-ರಾತ್ರಿ ಎನ್ನದೆ, ಮಳೆ-ಗಾಳಿ ಸೇರಿದಂತೆ ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಕರ್ತವ್ಯ ನಿರ್ವಹಿಸುತ್ತಾರೆ. ವಿದ್ಯುತ್ ವ್ಯತ್ಯಯ ಉಂಟಾದಾಗ ಅದನ್ನು ಸರಿಪಡಿಸಲು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಿಬ್ಬಂದಿ ಸದಾ ಶ್ರಮಿಸುತ್ತಾರೆ. ಜನರ ಸೇವೆಯೇ ನಮ್ಮ ಪ್ರಮುಖ ಕರ್ತವ್ಯವಾಗಿದ್ದು, ಈ ಸೇವೆಯಲ್ಲಿ ತೊಡಗಿರುವ ಪ್ರತಿಯೊಬ್ಬ ನೌಕರರ ಸುರಕ್ಷತೆ ಮತ್ತು ಆರೋಗ್ಯವೂ ಅಷ್ಟೇ ಮುಖ್ಯವಾಗಿದೆ” ಎಂದು ಹೇಳಿದರು.

ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ದೊರೆಯಲಿ. ಸಾರ್ವಜನಿಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಸೇವೆ ಒದಗಿಸುವ ನಮ್ಮ ಪ್ರಯತ್ನಗಳಿಗೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರಲಿ. ಬೆಸ್ಕಾಂ ಸಿಬ್ಬಂದಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗದೆ, ಎಲ್ಲರೂ ಆರೋಗ್ಯದಿಂದ ಮತ್ತು ಸುರಕ್ಷಿತವಾಗಿ ಕರ್ತವ್ಯ ನಿರ್ವಹಿಸುವಂತಾಗಲಿ” ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಘಟಕದ ಬೆಸ್ಕಾಂ ನೌಕರರು ಹಾಗೂ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now