--Ads--

ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ ಶಾಸಕ ದರ್ಶನ್ ಧ್ರುವನಾರಾಯಣ್

On: October 24, 2026 4:10 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ ಅಕ್ಟೋಬರ್ 24 ಮೈಸೂರು ಜಿಲ್ಲೆ, ದಕ್ಷಿಣಕಾಶಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ನಗರಸಭೆ ಕಚೇರಿ ಆವರಣದಲ್ಲಿ ಇಂದು ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಪರಿಹಾರ ದೊರಕಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕರು ತಮ್ಮ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ಈಗಾಗಲೇ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ತ್ರದಲ್ಲೇ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸ್ಥಳದಲ್ಲಿಯೇ ಸೂಕ್ತ ಪರಿಹಾರವನ್ನು ಗುರುತಿಸಿಕೊಳ್ಳುವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದು ಅದೇ ರೀತಿ ಇಂದು ನಂಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಸಣ್ಣಪುಟ್ಟ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡರು.

ಇದೇ ವೇಳೆ ಅಧಿಕಾರಿಗಳೊಂದಿಗೆ ಮಾತನಾಡುತ್ತಾ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಕಚೇರಿಗೆ ಬಂದರೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಪರಿಹಾರವನ್ನ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ  ಸೂಚನೆ ನೀಡಿದರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ , ತಹಸೀಲ್ದಾರ್ ಸ್ಮಿತಾ ರಾಮು, ನಗರಸಭೆ ಪೌರಾಯುಕ್ತ ಬಸವರಾಜ್, ಇಒ ಜೆರಾಲ್ಡ್ ರಾಜೇಶ್, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ. ಶಂಕರ್, ಗಾಯತ್ರಿ ಮೋಹನ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನಾಡ ದೇವಿ ತಾಯಿ ಚಾಮುಂಡೇಶ್ವರಿ ದೇವಿಯ ಸಹೋದರಿ ಬನ್ನಿ ಕಾಳಮ್ಮ ತಾಯಿಯ ದೇವಾಲಯ ಅಭಿವೃದ್ಧಿಗೆ ಸಹಕಾರ ನೀಡಿ ಭಕ್ತರ ಕೋರಿಕೆ

ಹದಿನಾರು ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ 

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳು ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳಬೇಕು :ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಗಳಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ

ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ಅವರಿಗೆ 2025 ನೇ ಸಾಲಿನ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪ್ರಧಾನ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ