--Ads--

ದೊಡ್ಡನಲ್ಲೂರಹಳ್ಳಿಯಲ್ಲಿ ‘ವಾಲ್ಮೀಕಿ ವಾಲಿಬಾಲ್ ಕಪ್ ಸೀಸನ್–1’ಗೆ ಚಾಲನೆ

On: October 25, 2026 8:27 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ದೊಡ್ಡನಲ್ಲೂರಹಳ್ಳಿಯಲ್ಲಿ ‘ವಾಲ್ಮೀಕಿ ವಾಲಿಬಾಲ್ ಕಪ್ ಸೀಸನ್–1’ಗೆ ಚಾಲನೆ

ತಾವರೆಕೆರೆ : ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಹೊಸಕೋಟೆ ತಾಲೂಕಿನ ದೊಡ್ಡನಲ್ಲೂರಹಳ್ಳಿ ಗ್ರಾಮದಲ್ಲಿ ‘ವಾಲ್ಮೀಕಿ ವಾಲಿಬಾಲ್ ಕಪ್ ಸೀಸನ್–1’ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಸಮಾಜ ಸೇವಕರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರಾದ ಕಿಟ್ಟಿ ಅವರ ನೇತೃತ್ವದಲ್ಲಿ ಟೂರ್ನಮೆಂಟ್ ಆಯೋಜಿಸಲಾಗಿದ್ದು, ಯುವಕರಲ್ಲಿ ಕ್ರೀಡಾಸಕ್ತಿ ಬೆಳೆಸುವುದು, ಆರೋಗ್ಯದ ಮಹತ್ವವನ್ನು ತಿಳಿಸುವುದು ಹಾಗೂ ಸಮುದಾಯದ ಯುವಕರಲ್ಲಿ ಒಗ್ಗಟ್ಟು ಮೂಡಿಸುವ ಉದ್ದೇಶವನ್ನು ಹೊಂದಿದೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಯುವಜನರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಇಂದಿನ ದಿನಗಳಲ್ಲಿ ಯುವಕರು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಹೆಚ್ಚಿನ ಸಮಯ ಕಳೆಯುತ್ತಿರುವ ಸಂದರ್ಭದಲ್ಲಿ, ಕ್ರೀಡೆಗಳತ್ತ ಹೆಚ್ಚಿನ ಒಲವು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ವಾಲಿಬಾಲ್‌ನಂತಹ ಕ್ರೀಡೆಗಳು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಶಿಸ್ತು, ಸಮಯಪ್ರಜ್ಞೆ, ತಂಡದ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುತ್ತವೆ ಎಂದು ಹೇಳಿದರು.

ಕ್ರೀಡಾಕೂಟಗಳಿಂದ ಯುವಕರ ನಡುವೆ ಸ್ನೇಹ, ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯ ಹೆಚ್ಚಾಗುತ್ತದೆ. ಗೆಲುವು-ಸೋಲುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆದು, ಪರಸ್ಪರ ಗೌರವಿಸುವ ಗುಣವೂ ವೃದ್ಧಿಸುತ್ತದೆ. ಇಂತಹ ಕ್ರೀಡಾ ಚಟುವಟಿಕೆಗಳು ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣ ಭಾಗದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮೂಲಕ ಯುವಕರಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಇಂತಹ ಟೂರ್ನಮೆಂಟ್‌ಗಳ ಪ್ರಮುಖ ಆಶಯವಾಗಿದೆ. ‘ವಾಲ್ಮೀಕಿ ವಾಲಿಬಾಲ್ ಕಪ್ ಸೀಸನ್–1’ ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರಿಗೆ ಪ್ರೇರಣೆಯಾಗಲಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳು ಹೊರಹೊಮ್ಮಲಿ ಎಂಬ ಆಶಯ ವ್ಯಕ್ತವಾಯಿತು.
ಇದೇ ಸಂದರ್ಭದಲ್ಲಿ ಟೂರ್ನಮೆಂಟ್ ಅಲ್ಲಿ ಭಾಗವಹಿಸಿದ್ದ ಆಟಗಾರರು ಹಾಗೂ ಗ್ರಾಮಸ್ಥರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now