ವಿಜಯ ದರ್ಪಣ ನ್ಯೂಸ್………
ಮಹರ್ಷಿ ವಾಲ್ಮೀಕಿ ಜಯಂತಿ ಭವ್ಯ ಮೆರವಣಿಗೆಗೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ
ತಾಂಡವಪುರ ಅಕ್ಟೋಬರ್ 26: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಭವ್ಯ ಮೆರವಣಿಗೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಾಡಿನ ಜನತೆಗೆ ಶುಭಾಶಯ ಕೋರುವ ಮೂಲಕ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳನ್ನು ವಿವರಿಸಿದರು
ಜ್ಞಾನ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಮತ್ತು ಜೀವನ ಸಂದೇಶಗಳು ಇಡೀ ಸಮಾಜಕ್ಕೆ ಸದಾ ದಾರಿ ದೀಪ ಹಾಗೂ ಪ್ರೇರಣೆಯಾಗಿವೆ. ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಶಾಂತಿ, ಸಮಾನತೆ ಮತ್ತು ನೈತಿಕ ಮೌಲ್ಯಗಳನ್ನು ಸಾರಿದ ವಾಲ್ಮೀಕಿ ಅವರ ತತ್ವಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿದ್ದು, ಸಮಾಜದಲ್ಲಿ ಶೋಷಿತ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ವಾಲ್ಮೀಕಿಯವರ ಆಶಯಗಳು ಮುಖ್ಯ ಶಕ್ತಿಯಾಗಿವೆ. ಎಂದು ಹೇಳಿದರು
ಈ ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಮೈಸೂರು ಮೂಡ ಮಾಜಿ ಅಧ್ಯಕ್ಷ ರಾಜೀವ್ ಸೇರಿದಂತೆ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರು, ವಿವಿಧ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಅಪಾರ ಸಂಖ್ಯೆಯ ಸಾರ್ವಜನಿಕರು ಮುಖಂಡರುಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು












