--Ads--

ದೇವಾಲಯಗಳ ಜೀರ್ಣೋಧ್ಧಾರಕ್ಕೆ ಧನಸಹಾಯ ಮಾಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ 

On: October 27, 2026 3:14 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ದೇವಾಲಯಗಳ ಜೀರ್ಣೋಧ್ಧಾರಕ್ಕೆ ಧನಸಹಾಯ ಮಾಡಿದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ 

ದೇವನಹಳ್ಳಿ, ಅಕ್ಟೋಬರ್ 26: ನಲ್ಲೂರು ಮತ್ತು ಅವತಿ ಗ್ರಾಮಗಳ ದೇವಾಲಯ ಅಭಿವೃದ್ಧಿಗೆ ಗ್ರಾಮಸ್ಥರ ಮನವಿ ಮೇರೆಗೆ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧನಸಹಾಯ ಮಾಡಿದ್ದೇನೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ದೇವನಹಳ್ಳಿ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ದೇವಾಲಯಗಳ ಅಭಿವೃದ್ಧಿಗೆ ಧನಸಹಾಯದ ಚೆಕ್ ಹಸ್ತಾಂತರಿಸಿ ಮಾತನಾಡಿದ ಅವರು, ದೇವನಹಳ್ಳಿ ತಾಲ್ಲೂಕು ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದ್ದು, ವಿವಿಧ ರಾಜ್ಯಗಳಿಂದ ಜನರು ನೆಲೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದೆ.

ದೇವನಹಳ್ಳಿ ಕ್ಷೇತ್ರದಿಂದ ಗೆದ್ದು ಸಚಿವರಾಗಿರುವ ಕೆ.ಎಚ್.ಮುನಿಯಪ್ಪ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿ ಮೂರು ವರ್ಷಗಳು ಮುಗಿಯುತ್ತಾ ಬಂದಿದ್ದು, ತಾಲ್ಲೂಕಿನಲ್ಲಿ ಅಭಿವೃದ್ಧಿ ಶೂನ್ಯ ಕೆಲ ಬಡವರ ಪಡಿತರ ಚೀಟಿ ರದ್ದು ಮಾಡಿರುವುದೇ ದೊಡ್ಡ ಸಾಧನೆ ಎಂದು ಟೀಕಿಸಿದರು.ನನ್ನನ್ನು ಶಾಸಕರಾಗಿ ಆಯ್ಕೆ ಮಾಡಿದ ತಾಲ್ಲೂಕಿನ ಮತದಾರರ ಆಶಯದಂತೆ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಪೂರೈಸಿದ್ದೇನೆ.

ಜನರ ಕಷ್ಟ-ಸುಖಗಳಿಗೆ ನೆರವಾಗಿದ್ದೇನೆ. ನನ್ನ ಅವಧಿ ಯಲ್ಲಿ ಪಕ್ಷಾತೀತವಾಗಿ ಯಾವುದೇ ಭೇದಭಾವ ಇಲ್ಲದೆ ಮದುವೆಗಳಿಗೆ, ಅನಾರೋಗ್ಯಕ್ಕೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ, ಯುವ ಪೀಳಿಗೆಗೆ ಕ್ರೀಡಾ ಸಾಮಗ್ರಿ ವಿತರಣೆ, ಹಬ್ಬ-ಹರಿದಿನಗಳಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಧನಸಹಾಯ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನನ್ನ ಕೈಯಿಂದ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೂರಾರು ಮಂದಿಗೆ ಆರ್ಥಿಕ ಸಹಾಯ, ಅಪಘಾತದಲ್ಲಿ ಮೃತರಾದವರಿಗೆ ಹಾಗೂ ಸಣ್ಣ-ಪುಟ್ಟ ಗಾಯಾಳುಗಳಿಗೆ ಧನಸಹಾಯ ನೀಡಿದ್ದೇನೆ. ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಧನಸ ಹಾಯ, ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನಾಟಕಗಳಿಗೆ ಹಾಗೂ ಯುವ ಜನತೆಗೆ ಕಬಡ್ಡಿ, ಕ್ರಿಕೆಟ್, ವಾಲಿಬಾಲ್ ಸೇರಿದಂತೆ ಇತರೆ ಕ್ರೀಡಾಕೂಟಗಳಿಗೆ ಹೆಚ್ಚಿನ ರೀತಿಯಲ್ಲಿ ಧನ ಸಹಾಯ ನೀಡಲಾಗಿದೆ. ನನ್ನ ಅವಧಿಯಲ್ಲಿ ತಾಲ್ಲೂಕ ನಾದ್ಯಂತ ನಡೆದಷ್ಟು ಅಭಿವೃದ್ಧಿ ಕಾಮಗಾರಿಗಳು ಇತ್ತೀಚೆಗೆ ನಡೆಯುತ್ತಿಲ್ಲ ಎಂದು ಹೇಳಿದರು.

ಚನ್ನರಾಯಪಟ್ಟಣ ಹೋಬಳಿಯ ಹೊಸನಲ್ಲೂರು ಗ್ರಾಮದಲ್ಲಿ ಶ್ರೀ ಮುನೇಶ್ವರಸ್ವಾಮಿ ನೂತನ ದೇವಾಲಯದ ನಿರ್ಮಾಣ ಕಾರ್ಯಕ್ಕೆ ಕೈ ಜೋಡಿಸಿ, ಗ್ರಾಮದ ಮುಖಂಡರಾದ ಗೋಪಿ ಹಾಗೂ ದೇವಾಲಯ ಸಮಿತಿ ಮುಖಂಡರಾದ ಮೂರ್ತಿ ಮತ್ತು ಮುನಿಯಪ್ಪ ಅವರಿಗೆ ವೈಯಕ್ತಿಕ ದೇವಾಲಯ ನಿರ್ಮಾಣ ಕಾರ್ಯ ಶೀಘ್ರ ಪೂರ್ಣ ಗೊಂಡು, ಶ್ರೀ ಮುನೇಶ್ವರಸ್ವಾಮಿಯ ಕೃಪೆ ಸದಾ ಹೊಸನಲ್ಲೂರು ಗ್ರಾಮಸ್ಥರು ಹಾಗೂ ನಮ್ಮ ಕ್ಷೇತ್ರದ ಸಮಸ್ತ ಜನತೆಯ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಸಾದಹಳ್ಳಿ ಮಹೇಶ್, ತಾಲ್ಲೂಕು ಉಪಾಧ್ಯಕ್ಷ ಕಾಳಪ್ಪ ನವರ ವೆಂಕಟೇಶ್, ತಾಲ್ಲೂಕು ಎಸ್‌ಸಿ ಘಟಕದ ಅಧ್ಯಕ್ಷ ರಾಮಣ್ಣ, ಕಾರ್ಯಾಧ್ಯಕ್ಷ ಶಿವಾನಂದ್, ಕಾರ್ಯದರ್ಶಿ ಮೂರ್ತಿ ಹಾಗೂ ಮುಖಂಡ ಸೋಮಣ್ಣ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now