--Ads--

ಕನ್ನಡ ಭಾಷೆ ,ಸಾಹಿತ್ಯ ,ಸಂಸ್ಕೃತಿಯ ಬೆಳವಣಿಗೆಗೆ ಸಾಹಿತ್ಯ ಸಮ್ಮೇಳನಗಳು ಮಹತ್ವದ ವೇದಿಕೆ : ಶಾಸಕ ಬಿ.ಎನ್.ರವಿಕುಮಾ‌ರ್

On: October 28, 2026 3:02 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಕನ್ನಡ ಭಾಷೆ ,ಸಾಹಿತ್ಯ ,ಸಂಸ್ಕೃತಿಯ ಬೆಳವಣಿಗೆಗೆ ಸಾಹಿತ್ಯ ಸಮ್ಮೇಳನಗಳು ಮಹತ್ವದ ವೇದಿಕೆ : ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಾಹಿತ್ಯ ಸಮ್ಮೇಳನಗಳು ಮಹತ್ವದ ವೇದಿಕೆಗಳಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಸರ್ಕಾರ ಅನುದಾನ ಒದಗಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಾಹಿತ್ಯ ಸಮ್ಮೇಳನ ಆಯೋಜಿಸುವ ಕುರಿತು ತಾಲ್ಲೂಕಿನ ಮೇಲೂರಿನ ಅವರ ಗೃಹ
ಕಚೇರಿಯಲ್ಲಿ ಚರ್ಚಿಸಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

11ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಚರ್ಚಿಸಿ ನಿಗದಿಪಡಿಸಬೇಕು ಎಲ್ಲರಿಗೂ ಅನುಕೂಲವಾಗುವ ದಿನಾಂಕ ತಿಳಿಸಿದರೆ, ಸಮ್ಮೇಳನ ಆಯೋಜನೆಗೆ ಸಹಕಾರ ನೀಡುವುದಾಗಿ ಹೇಳಿದರು.

2028ರಲ್ಲಿ ರಾಜ್ಯದಲ್ಲಿ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬಂದರೆ ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ವಿಶೇಷ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ವಿ.ನಾಗರಾಜರಾವ್,ತಾಲ್ಲೂಕು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ,ಮಾಜಿ ಅಧ್ಯಕ್ಷ ವಿ. ಕೃಷ್ಣ, ಕಾರ್ಯದರ್ಶಿ ಟಿ.ಟಿ. ನರಸಿಂಹಪ್ಪ ,ಬೆಳ್ಳೂಟಿ ಮುನಿಕೆಂಪಣ್ಣ,ರಾಮಾಂಜಿ ,ಎ.ಎಸ್.ರವಿ.ಈ ಧರೆ ಪ್ರಕಾಶ್ ,ಮೇಲೂರು ಮಂಜುನಾಥ್, ಬಿ.ಪ್ರತೀಶ್,
ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now