--Ads--

ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ: ಡಾ. ಕೆ. ಎನ್. ಅನುರಾಧ ಸ್ಪಷ್ಟನೆ

On: October 28, 2026 3:49 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣ

ಅಂತಿಮ ಮತದಾರರ ಪಟ್ಟಿ ಪ್ರಕಟ: ಮಹಿಳಾ ಮತದಾರರೆ ಹೆಚ್ಚು

ಜಿಲ್ಲೆಯಲ್ಲಿ 8,04,534 ಮತದಾರರು

ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ: ಡಾ. ಕೆ. ಎನ್. ಅನುರಾಧ ಸ್ಪಷ್ಟನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಅ.28 :

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಅಂತಿಮ ಮತದಾರರ ಪಟ್ಟಿಯುಲ್ಲಿ 8,04,534 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಅಂತಿಮ ಮತದಾರ ಪಟ್ಟಿ ಪ್ರಕಟಕ್ಕೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್ಐಆರ್ ಪ್ರಕ್ರಿಯೆ ಮುಕ್ತಾಯವಾಗಿದ್ದು ನಡೆದಿದ್ದು ಅಂತಿಮ ಮತದಾರರ ಪಟ್ಟಿಯಲ್ಲಿ 3,95,473 ಪುರುಷ ಮತದಾರರು, 4,09,001 ಮಹಿಳಾ ಮತದಾರರು ಹಾಗೂ 60 ಇತರೆ ಮತದಾರರು ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ 8,04,534 ಮತದಾರರಿದ್ದಾರೆ.

ವಿಧಾನಸಭಾ ಕ್ಷೇತ್ರವಾರು ಮಾಹಿತಿ
1. ಹೊಸಕೋಟೆ ವಿಧಾನಸಭಾ ಕ್ಷೇತ್ರ- 1,08,430 ಪುರುಷರು, 1,11,757 ಮಹಿಳೆಯರು ಹಾಗೂ 4 ಇತರೆ ಮತದಾರರು ಸೇರಿದಂತೆ 2,20,191 ಮತದಾರರಿದ್ದಾರೆ.
2. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 97,048 ಪುರುಷರು, 99,918 ಮಹಿಳೆಯರು ಹಾಗೂ 11 ಇತರೆ ಮತದಾರರು ಸೇರಿದಂತೆ 1,96,977 ಮತದಾರರಿದ್ದಾರೆ.
3. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 95,589 ಪುರುಷರು, 98,740 ಮಹಿಳೆಯರು ಹಾಗೂ 1 ಇತರೆ ಮತದಾರರು ಸೇರಿದಂತೆ 1,94,330 ಮತದಾರರಿದ್ದಾರೆ.
4. ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 94,406 ಪುರುಷರು, 98,586 ಮಹಿಳೆಯರು ಹಾಗೂ 44 ಇತರೆ ಮತದಾರರು ಸೇರಿದಂತೆ 1,93,036 ಮತದಾರರಿದ್ದಾರೆ ಎಂದು ಡಿಸಿ ಮಾಹಿತಿ ನೀಡಿದರು.

3814 ಮತದಾರರ ಡಿಲಿಟ್

ಎಸ್ಐಆರ್ ಪ್ರಕ್ರಿಯೆಯಲ್ಲಿ ಐವರು ಮೃತರು, 1,716 ಶಾಶ್ವತ ವಲಸೆ ಹೋಗಿರುತ್ತಾರೆ, 2,093 ಇತರೆಡೆ ನೋಂದಣಿ ಆಗಿರುವವರು ಸೇರಿ 3814 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

ಎಸ್ಐಆರ್ ಪ್ರಕ್ರಿಯೆಯಡಿ ನೋ ಮ್ಯಾಪಿಂಗ್ ಹಾಗೂ ಅನಾಮಲಿಸ್ (2002ಕ್ಕೆ ಮ್ಯಾಪಿಂಗ್ನಲ್ಲಿ ವ್ಯತ್ಯಾಸ ಕಂಡುಬಂದ ಪ್ರಕರಣಗಳು) ಒಳಗೊಂಡಂತೆ 56349 ಮತದಾರರಿಗೆ ನೋಟೀಸ್ ನೀಡಿ ವಿಚಾರಣೆ ನಡೆಸಲಾಗಿದೆ.

18-19 ವರ್ಷ ವಯಸ್ಸಿನ 14,568 ಮತದಾರರಿದ್ದಾರೆ, 8,604 ಮಂದಿ 85 ವರ್ಷಕ್ಕೂ ಮೇಲ್ಪಟ್ಟ ಮತದಾರರಿದ್ದಾರೆ. 12,151 ವಿಶೇಷಚೇತನ ಮತದಾರರಿದ್ದಾರೆ. 06 ಎನ್ಆರ್ಐ (ಅನಿವಾಸಿ ಭಾರತೀಯ) ಮತದಾರರಿದ್ದಾರೆ.. 108 ಸೇವಾ ಮತದಾರರಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಮತದಾರರೇ ಹೆಚ್ಚಾಗಿದ್ದಾರೆ. 3,95,473 ಪುರುಷ ಮತದಾರರಿದ್ದು, 4,09,061 ಮಹಿಳಾ ಮತದಾರರಿದ್ದಾರೆ. ಜನಸಂಖ್ಯೆಗನುಗುಣವಾಗಿ 1034 ಲಿಂಗಾನುಪಾತ ಇದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 04 ಮತಕ್ಷೇತ್ರಗಳಲ್ಲಿ ನಡೆದ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ-2026 ಸಂಬಂಧ, ಎಲ್ಲಾ ಪ್ರಕ್ರಿಯೆ, ಪ್ರಗತಿ ಕುರಿತ ವಿವರಗಳನ್ನು ಹಾಗೂ ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಅಧಿಕೃತ ವೆಬ್ ಸೈಟ್ https://voters.eci.gov.in/ & https://bangalorerural.nic.in/ ಮೂಲಕ ಪರಿಶೀಲಸಬಹುದು ಹಾಗೂ ಮತದಾರರ ಪಟ್ಟಿಯನ್ನು ಡೌನ್ ಮಾಡಿಕೊಳ್ಳಬಹುದು ಜೊತೆಗೆ ಎಲ್ಲಾ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಪ್ರಚೂರ ಪಡಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿರುವ ಅರ್ಹ ಮತದಾರರು ಸೇರ್ಪಡೆಗೆ ನಮೂನೆ-6ರ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಸಿಇಓ ಡಾ. ವಾಸಂತಿ ಅಮರ್, ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಎಸಿ ಮಂಜುನಾಥ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಶಿವ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಅಶೋಕ್ ಕುಮಾರ್ ಡಿ,ತಾಲ್ಲೂಕು ಮತದಾರರ ನೋಂದಣಾಧಿಕಾರಿಗಳು, ಚುನಾವಣೆ ಶಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now