ವಿಜಯ ದರ್ಪಣ ನ್ಯೂಸ್…….
ಜೆಡಿಎಸ್ ಎಸ್.ಟಿ ಘಟಕದ ಪದಾಧಿಕಾರಿಗಳ ನೇಮಕ ಹಾಗೂ ವಾಲ್ಮೀಕಿ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ

ದೇವನಹಳ್ಳಿ : ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ನವೆಂಬರ್ 04-11-2026 ರಂದು ನಡೆಯಲಿರುವ ಎಸ್.ಟಿ ಘಟಕದ ನೂತನ ಪದಾಧಿಕಾರಿಗಳ ನೇಮಕ ಕಾರ್ಯಕ್ರಮ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಯಶಸ್ವಿ ನಿರ್ವಹಣೆಗಾಗಿ ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರ ನೇತೃತ್ವದಲ್ಲಿ ಗುರುವಾರ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.
ಮಾಜಿ ಶಾಸಕ ನಿಸರ್ಗ ಎಲ್.ಎನ್. ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ವಿ. ಮಂಜುನಾಥ್ ಹಾಗೂ ದೇವನಹಳ್ಳಿ ತಾಲೂಕು ಎಸ್.ಟಿ ಘಟಕದ ಅಧ್ಯಕ್ಷ ಶ್ರೀ ವೆಂಕಟೇಶಮೂರ್ತಿ ಅವರ ನೇತೃತ್ವದಲ್ಲಿ ಸಭೆ ಜರುಗಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, “ದೇವನಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟುವುದು ನಮ್ಮೆಲ್ಲರ ಆದ್ಯತೆಯಾಗಿದೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುವ ಸಕ್ರಿಯ ಕಾರ್ಯಕರ್ತರಿಗೆ ಎಸ್.ಟಿ ಘಟಕದಲ್ಲಿ ಸೂಕ್ತ ಸ್ಥಾನಮಾನ ಹಾಗೂ ಜವಾಬ್ದಾರಿಗಳನ್ನು ನೀಡುವ ಮೂಲಕ ಪಕ್ಷ ಸಂಘಟನೆಗೆ ವೇಗ ನೀಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷ ಕೆ.ವಿ ಮಂಜುನಾಥ್, ತಾಲೂಕು ಅಧ್ಯಕ್ಷ ಎಸ್.ಮಹೇಶ್ ಹಾಗೂ ಎಸ್.ಸಿ ಘಟಕದ ಅಧ್ಯಕ್ಷ ವೆಂಕಟೇಶಮೂರ್ತಿ ಅವರು ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ. ಇದರೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲಾಗುವುದು” ಎಂದು ತಿಳಿಸಿದರು.
ಸಭೆಯಲ್ಲಿ ಸಮುದಾಯದ ಸಂಘಟನೆ, ಸಕ್ರಿಯ ಕಾರ್ಯಕರ್ತರಿಗೆ ಜವಾಬ್ದಾರಿ ಹಂಚಿಕೆ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಸಂಪೂರ್ಣ ಯಶಸ್ಸಿನ ಕುರಿತು ಕೂಲಂಕಷವಾಗಿ ಚರ್ಚಿಸಲಾಯಿತು.
ಈ ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್ ಮುಖಂಡರಾದ ಯರ್ತಗಾನಹಳ್ಳಿ ಶಿವಣ್ಣ, ವಿಜಯಪುರ ಶ್ರೀರಾಮಣ್ಣ, ಬಿದಲೂರು ನಾಗರಾಜ್, ಶಾಮಣ್ಣ, ರಾಮಣ್ಣ, ಅಪ್ಪಯ್ಯಣ್ಣ, ವಿಜಯಪುರ ಪುರಸಭೆಯ ಮಾಜಿ ಸದಸ್ಯ ರಾಮು, ಮಂಡಿಬೆಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಅಂಬಿಕಾ ವೀರಭದ್ರಪ್ಪ, ಚಂದ್ರಶೇಖರ್ ಸೇರಿದಂತೆ ಹಲವು ಪ್ರಮುಖ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.









