--Ads--

ಕಾಂಗ್ರೆಸ್ ಸರ್ಕಾರದ ಬಗ್ಗೆ ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ : ಸೀಕಲ್ ರಾಮಚಂದ್ರಗೌಡ

On: October 29, 2026 4:47 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಕಾಂಗ್ರೆಸ್ ಸರ್ಕಾರದ ಬಗ್ಗೆ ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ : ಸೀಕಲ್ ರಾಮಚಂದ್ರಗೌಡ

ಶಿಡ್ಲಘಟ್ಟ : ರಾಜ್ಯ ಕಾಂಗ್ರೆಸ್ ಆಡಳಿತದ ಬಗ್ಗೆ ರಾಜ್ಯದ ಜನತೆ ತೀವ್ರ ಭ್ರಮನಿರಸನಗೊಂಡಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ , ಇನ್ನಾವುದೆ ಚುನಾವಣೆ ಇರಬಹುದು, ಕಾಂಗ್ರೆಸ್‌ಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಮತದಾರರು ತಮ್ಮ ತೀರ್ಪು ಕೊಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ವಿಧಾನಪರಿಷತ್‌ನ 4 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ನಗರದ ಕೋಟೆ ವೃತ್ತದಲ್ಲಿ ಪ್ರಸನ್ನ ಶ್ರೀಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ವಿಜಯೋತ್ಸವ ಆಚರಿಸಿ ಅವರು ಮಾತನಾಡಿದರು.

ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ ಗ್ಯಾರಂಟಿಗಳಿಂದ ಬಹುತೇಕ ಮಹಿಳಾ ಮತದಾರರು, ಯುವಕರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ಕೊಟ್ಟು ಗೆಲ್ಲಿಸಿದರು ಆದರೆ ನಂತರದ ದಿನಗಳಲ್ಲಿ ಕಾಂಗ್ರೆಸ್‌ನ ಜನವಿರೋಧಿ, ರೈತ ವಿರೋಧಿ ಆಡಳಿತದಿಂದ ಬೇಸತ್ತು ಕಾಂಗ್ರೆಸ್‌ಗೆ ಬೆನ್ನು ತೋರುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಮೇಲೆ ರಾಜ್ಯದ ಮತದಾರರು ಇಟ್ಟಿದ್ದ ನಂಬಿಕೆ, ವಿಶ್ವಾಸ ಕಳೆದುಕೊಂಡಿದ್ದಾರೆ ಇದರ ಪರಿಣಾಮವೇ ವಿಧಾನಪರಿಷತ್‌ನ 4 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸೋತಿದ್ದಾರೆ ಎಂದರು.

ಪರಿಷತ್‌ನ 4 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ 4 ಅಭ್ಯರ್ಥಿಗಳು ಪರಾಭವಗೊಂಡಿದ್ದಾರೆ ಇದು ಮುಂದಿನ ಎಲ್ಲ ಚುನಾವಣೆಗಳಿಗೂ ದಿಕ್ಸೂಚಿಯಾಗಲಿದ್ದು ಮೈತ್ರಿ ಪರವಾಗಿ ಮತದಾರರು ಇದ್ದಾರೆ ಎಂಬುದು ಈ ಚುಣಾವಣೆಯಿಂದ ಸಾಬೀತಾಗಿದೆ ಎಂದರು.

ಈ ಸಂದರ್ಭದಲ್ಲಿ ಬೆಜೆಪಿ ಗ್ರಾಮಾಂತರ ಅದ್ಯಕ್ಷ ಸೀಕಲ್ ಆನಂದಗೌಡ , ಮಾಜಿ ಅದ್ಯಕ್ಷ ಕೆ.ಸುರೇಂದ್ರಗೌಡ ಹಾಗು
ಅನೇಕ ಮುಖಂಡರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now