ವಿಜಯ ದರ್ಪಣ ನ್ಯೂಸ್…….
2028 ಕ್ಕೆ ಕುಮಾರಸ್ವಾಮಿ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗಲಿದ್ದಾರೆ : ಶಾಸಕ ಬಿ.ಎನ್.ರವಿಕುಮಾರ್

ಶಿಡ್ಲಘಟ್ಟ : ಮುಂಬರುವ 2028 ರ ವಿದಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ.140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ
ಎಚ್.ಡಿ.ಕುಮಾರಸ್ವಾಮಿ ಮೂರನೇ ಬಾರಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಬಿ.ಎನ್. ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಮೇಲೂರಿನ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಕೆ.ಎಂ.ಸುರೇಶ್ ಅವರು ಸುಮಾರು 23 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಕ್ಷೇತ್ರದ ಶಿಕ್ಷಕರು ಮತ್ತು ಪದವೀಧರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ಜನರು ನೀಡಿರುವ ಎಚ್ಚರಿಕೆಯಾಗಿದೆ ಎಂದು ಹೇಳಿದರು.
ಮುಂದಿನ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಲಿವೆ ಎಂದರು.
ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳ ಗೆಲುವು ಮುಂಬರುವ ಚುನಾವಣೆಗಳಿಗೆ ಭದ್ರ ಬುನಾದಿ ಹಾಕಿದೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮನ್ವಯದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ವಿಚಾರದಲ್ಲಿ ಕಾಂಗ್ರೆಸ್ ಜನರನ್ನು ದಿಕ್ಕು ತಪ್ಪಿಸುತ್ತಿದೆ
ಕಾಂಗ್ರೆಸ್ ವಿರುದ್ಧ ಆರೋಪಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ನಿಯಮಾನುಸಾರ ಸರಿಪಡಿಸಿಕೊಳ್ಳಲು ಅವಕಾಶವಿದೆ ,
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದ್ದರೂ, ಜನರಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ಸಾರಾಯಿ ನಿಷೇಧ ಹಾಗೂ ಲಾಟರಿ ನಿಷೇಧದಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ರೈತರು, ಬಡವರು, ಯುವಕರು ಮತ್ತು ಮಹಿಳೆಯರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು ಶಿಕ್ಷಣ, ಆರೋಗ್ಯ, ರಸ್ತೆ, ಕುಡಿಯುವ ನೀರು ಹಾಗೂ ಒಳಚರಂಡಿ ಸೌಲಭ್ಯಗಳ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಚ್.ಎನ್. ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ಯೋಜನೆಗಳಡಿ ಕ್ಷೇತ್ರದ ಒಂಬತ್ತು ಕೆರೆಗಳಿಗೆ ನೀರು ಹರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು ಶೆಟ್ಟಿಹಳ್ಳಿ ಮತ್ತು ಬಂಡೆಮ್ಮನ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಬಂಕ್ ಮುನಿಯಪ್ಪ, ಹುಜುಗೂರು ರಾಮಣ್ಣ,ತಾಸೂರು ರಘು ,ಆನೂರು ವಿಜಯೇಂದ್ರ, ಮೇಲೂರು ಮಂಜುನಾಥ್, ಮುಗಿಲಡಿಪಿ ನಂಜಪ್ಪ, ಆರ್.ಎ.ಉಮೇಶ್, ಎಸ್.ಎಂ.ರಮೇಶ್, ನಂದಕಿಶನ್, ಎಸ್.ಎನ್.ವೆಂಕಟೇಶ್ ಮುಂತಾದವರು
ಹಾಜರಿದ್ದರು.










