ವಿಜಯ ದರ್ಪಣ ನ್ಯೂಸ್…….
ಕೊಡಗಿನ ಪ್ರವಾಸಿ ತಾಣಗಳಲ್ಲಿ ಹೋಮ್ ಮೇಡ್ ವೈನ್ ಹೆಸರಿನಲ್ಲಿ ನಕಲಿ ಮದ್ಯ ಮಾರಾಟ? ಅಬಕಾರಿ ಇಲಾಖೆ ತಕ್ಷಣ ಪರಿಶೀಲನೆ ನಡೆಸಲಿ!

ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಹೋಮ್ ಮೇಡ್ ವೈನ್ ಎಂಬ ಹೆಸರಿನಲ್ಲಿ ನಕಲಿ ವೈನ್ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.
ಕೊಡಗಿನ ಹೆಸರನ್ನು ಬಳಸಿಕೊಂಡು ಪ್ರವಾಸಿಗರಿಗೆ ಹೋಮ್ ಮೇಡ್ ವೈನ್ ಎಂದು ಹೇಳಿ ಯಾವ ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ? ಅವುಗಳ ತಯಾರಿಕಾ ವಿಧಾನ ಗುಣಮಟ್ಟ ಪರವಾನಗಿ ಹಾಗೂ ಅಬಕಾರಿ ಇಲಾಖೆಯ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವುದು ಅತ್ಯಗತ್ಯ.
ಪ್ರವಾಸಿಗರ ಆರೋಗ್ಯದೊಂದಿಗೆ ಚೆಲ್ಲಾಟವಾಡಲು ಯಾರಿಗೂ ಅವಕಾಶ ನೀಡಬಾರದು ಹೋಮ್ ಮೇಡ್ ವೈನ್ ಹೆಸರಿನಲ್ಲಿ ನಿಯಮಬಾಹಿರ ಅಥವಾ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಸಾಬೀತಾದರೆ ಅಂತಹ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಕೇವಲ ದೂರುಗಳಿಗಾಗಿ ಕಾಯದೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ವೈನ್ ಮಾರಾಟ ಮಳಿಗೆಗಳು ಹಾಗೂ ಸಂಬಂಧಪಟ್ಟ ವ್ಯಾಪಾರ ಕೇಂದ್ರಗಳಿಗೆ ಭೇಟಿ ನೀಡಿ ವಿಶೇಷ ತಪಾಸಣೆ ನಡೆಸಬೇಕು.
ಕೊಡಗಿನ ಪ್ರವಾಸೋದ್ಯಮದ ಹೆಸರಿನಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ.
ಕೊಡಗು ಜನ ಅಭಿವೃದ್ಧಿ ಸಮಿತಿ









