--Ads--

ನವೆಂಬರ್ 1 ರಂದು 71ನೇ ಕನ್ನಡ ರಾಜ್ಯೋತ್ಸವ

On: October 31, 2026 1:02 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ನವೆಂಬರ್ 1 ರಂದು 71ನೇ ಕನ್ನಡ ರಾಜ್ಯೋತ್ಸವ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಅ. 31, :

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಹೊಸಕೋಟೆ ಶಾಸಕ ಹಾಗೂ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಶರತ್ ಕುಮಾರ್ ಬಚ್ಚೇಗೌಡ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ  ಎಸ್. ರವಿ, ಎನ್. ರಾಮೋಜಿ ಗೌಡ, ನೆಲಮಂಗಲ ಶಾಸಕ ಶ್ರೀನಿವಾಸ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ. ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಾನೇಗೌಡ ಎಸ್ ಹೆಚ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ಕೃಷ್ಣಪ್ಪ, ಮೇಟ್ರೋ ರೈಲ್ವೆ ಕಾರ್ಪೋರೇಷನ್ ಲಿ. ಹಾಗೂ ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಫಿ.ಸಿ ಜಾಫರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ.ಎನ್.ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್.ಬಿ.ವಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್.ಎಂ.ವಿ ಅವರು ಭಾಗವಹಿಸುವರು.

ಚರ್ಮಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರಜಿಲ್ಲೆ, ಅ.31:

2026-27ನೇ ಸಾಲಿನಲ್ಲಿ ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚರ್ಮಕುಶಲಕರ್ಮಿಗಳು ಹಾಗೂ ಅರ್ಹ ಫಲಾನುಭವಿಗಳಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಗಳ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗಮದ ವತಿಯಿಂದ ಕಾಯಕ ಸ್ಫೂರ್ತಿ, ಮಹಿಳೆಯರಿಗೆ ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಚರ್ಮಶಿಲ್ಪಿ ಯೋಜನೆ, ನೇರ ಸಾಲ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಕಾರರ ವಸತಿ ಯೋಜನೆ ಹಾಗೂ ಚರ್ಮಕಾರರ ಕಿರು ಆರ್ಥಿಕ ನೇರ ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.

ಆಸಕ್ತ ಅರ್ಹ ಫಲಾನುಭವಿಗಳು ನವೆಂಬರ್ 28 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿದಾರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಿಡ್ಕರ್‌ನ ಪ್ರಧಾನ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕರ ಮೊಬೈಲ್ ಸಂಖ್ಯೆ: 9060163031 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

WhatsApp

Join Now

Telegram

Join Now

Instagram

Join Now