--Ads--

ನೆಲಮಂಗಲದಲ್ಲಿ ಅರ್ಥಪೂರ್ಣವಾಗಿ ಜರುಗಿದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

On: November 1, 2026 1:49 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ನೆಲಮಂಗಲದಲ್ಲಿ ಅರ್ಥಪೂರ್ಣವಾಗಿ ಜರುಗಿದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನೆಲಮಂಗಲ: ಕನ್ನಡ ಸಾಹಿತ್ಯ ಪರಿಷತ್ತು ನೆಲಮಂಗಲ ತಾಲ್ಲೂಕು ಘಟಕದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆ ಎದುರಿನ ನೇತಾಜಿ ಪಾರ್ಕ್‌ನಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಹಿರಿಮೆಯನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಕನ್ನಡಪರ ಹೋರಾಟಗಾರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮಹಿಳಾ ನಾಯಕಿಯರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದು, ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಕನ್ನಡಿಗರಲ್ಲಿ ಭಾಷಾಭಿಮಾನ ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗದೆ, ಪ್ರತಿನಿತ್ಯದ ಬದುಕಿನಲ್ಲಿ ಕನ್ನಡದ ಬಳಕೆ ಹೆಚ್ಚಾಗಬೇಕು ಎಂಬ ಆಶಯ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವ ಗಣ್ಯರು ಹಾಗೂ ಕನ್ನಡಾಭಿಮಾನಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ನೆಲಮಂಗಲ ತಾಲ್ಲೂಕು ಘಟಕದ ವತಿಯಿಂದ ಕಾರ್ಯಕ್ರಮ ದಲ್ಲಿ ಬಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಗಳನ್ನು ಅರ್ಪಿಸುತ್ತೇವೆ.

ಜೈ ಭುವನೇಶ್ವರಿ, ಜೈ ಕರ್ನಾಟಕ ಮಾತೆ!

WhatsApp

Join Now

Telegram

Join Now

Instagram

Join Now