--Ads--

ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

On: November 1, 2026 5:15 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನಂತರ ಮಾತನಾಡಿ ಕನ್ನಡ ಭಾಷೆಯು ಸಾವಿರಾರು ವರ್ಷಗಳ ಸುದೀರ್ಘ ಇತಿಹಾಸವನ್ನು ಹೊಂದಿದ್ದು, ತನ್ನದೇ ಆದ ಸಾಹಿತ್ಯಿಕ ಪರಂಪರೆ, ಸಾಂಸ್ಕೃತಿಕ ವೈಶಿಷ್ಟ್ಯ ಹಾಗೂ ಶ್ರೀಮಂತ ಇತಿಹಾಸದಿಂದ ವಿಶ್ವದ ಗಮನ ಸೆಳೆದಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಮಹನೀಯರು ತಮ್ಮ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ಕವಿಗಳು, ಸಾಹಿತಿಗಳು, ವಚನಕಾರರು ಹಾಗೂ ಸಮಾಜ ಸುಧಾರಕರು ಕನ್ನಡ ಭಾಷೆಯ ಬೆಳವಣಿಗೆಗೆ ಅಪಾರ ಸೇವೆ ಸಲ್ಲಿಸಿದ್ದಾರೆ.

ಇಂತಹ ಮಹನೀಯರ ಕೊಡುಗೆಗಳನ್ನು ಸ್ಮರಿಸುವುದರ ಜೊತೆಗೆ, ಮುಂದಿನ ಪೀಳಿಗೆಗೆ ಕನ್ನಡದ ಮಹತ್ವವನ್ನು ತಿಳಿಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ.

1956ರ ನವೆಂಬರ್ 1ರಂದು ಕನ್ನಡ ಭಾಷೆ ಮಾತನಾಡುವ ಹಲವು ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ನಂತರ 1973ರ ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು.

ಈ ಐತಿಹಾಸಿಕ ದಿನದ ಸ್ಮರಣಾರ್ಥ ಪ್ರತಿವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.ಕನ್ನಡ ರಾಜ್ಯೋತ್ಸವವು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಪ್ರತಿದಿನವೂ ಕನ್ನಡ ಭಾಷೆಯನ್ನು ಗೌರವಿಸುವ, ಕನ್ನಡಿಗರಾಗಿ ನಮ್ಮ ಕರ್ತವ್ಯಗಳನ್ನು ಅರಿತುಕೊಳ್ಳುವ ಹಾಗೂ ನಾಡಿನ ಪ್ರಗತಿಗೆ ಕೈಜೋಡಿಸುವ ಸಂಕಲ್ಪದ ದಿನವಾಗಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮದ ಆಶಯವನ್ನು ವ್ಯಕ್ತಪಡಿಸಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವ ಪ್ರಕಾಶ್, ಎಸ್ ಡಿ ಎ ಮೀನಾಕ್ಷಿ, ಕರ ವಸೂಲಿಗಾರ ರಾಜಣ್ಣ, ಪಂಚಾಯಿತಿ ಸಿಬ್ಬಂದಿ ಬಚ್ಚೇಗೌಡ, ಮಂಜುನಾಥ್, ಭರತ್ ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now