--Ads--

ಕರ್ನಾಟಕ ರಾಜ್ಯೋತ್ಸವದಂದು ಕನ್ನಡ ನಾಡಿಗೆ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿನ ಕೊಡುಗೆ: ಸಂಸದ ಡಾ. ಸಿ. ಎನ್. ಮಂಜುನಾಥ್

On: November 2, 2026 3:22 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಕರ್ನಾಟಕ ರಾಜ್ಯೋತ್ಸವದಂದು ಕನ್ನಡ ನಾಡಿಗೆ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿನ ಕೊಡುಗೆ: ಸಂಸದ ಡಾ. ಸಿ. ಎನ್. ಮಂಜುನಾಥ್

ಬೆಂಗಳೂರು: ಭಾರತೀಯ ರೈಲ್ವೆಯು ಕರ್ನಾಟಕದಲ್ಲಿ ಆಧುನಿಕ ರೈಲು ಸೇವೆಗಳನ್ನು ನಿರಂತರವಾಗಿ ವಿಸ್ತರಿಸುತ್ತಿದ್ದು, 2026–27ನೇ ಸಾಲಿನಲ್ಲಿ ರಾಜ್ಯಕ್ಕೆ ದಾಖಲೆ ಪ್ರಮಾಣದ ₹7,748 ಕೋಟಿ ರೈಲ್ವೆ ಬಜೆಟ್ ಅನುದಾನ ಮೀಸಲಿಡಲಾಗಿದೆ.

ಈ ಮಹತ್ವಾಕಾಂಕ್ಷಿ ಯೋಜನೆಗಳ ಭಾಗವಾಗಿ, ದೇಶದ ಹೈಟೆಕ್ ನಗರ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಇಂದು, ನವೆಂಬರ್ 1, 2026ರಂದು ಚಾಲನೆ ನೀಡಲಾಯಿತು.

ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಜನಪ್ರಿಯ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರಾದ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ಅವರು ಹಲವು ಕೇಂದ್ರ ಸಚಿವರು, ಸಂಸದರು, ಗಣ್ಯರು ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೇರಿ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿಸಿ ಶುಭಾರಂಭ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಿ. ಎನ್. ಮಂಜುನಾಥ್ ಅವರು, ಕರ್ನಾಟಕ ರಾಜ್ಯೋತ್ಸವದ ಶುಭ ದಿನದಂದು ಕರ್ನಾಟಕದ ಜನತೆಗೆ ಈ ಅತ್ಯಾಧುನಿಕ ರೈಲು ಸೇವೆಯನ್ನು ಕೊಡುಗೆಯಾಗಿ ನೀಡಿರುವುದು ಅತ್ಯಂತ ಸಂತಸದ ಮತ್ತು ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

“ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ರೈಲ್ವೆ ವ್ಯವಸ್ಥೆಯು ಹೊಸ ಯುಗದತ್ತ ಸಾಗುತ್ತಿದೆ. ಕರ್ನಾಟಕಕ್ಕೆ ದಾಖಲೆ ಪ್ರಮಾಣದ ಅನುದಾನ ನೀಡುವುದರೊಂದಿಗೆ, ಬೆಂಗಳೂರು–ಮುಂಬೈ ನಡುವಿನ ಸಂಪರ್ಕವನ್ನು ಮತ್ತಷ್ಟು ಸುಲಭ, ವೇಗ ಮತ್ತು ಆರಾಮದಾಯಕವಾಗಿಸುವ ವಂದೇ ಭಾರತ್ ಸ್ಲೀಪರ್ ರೈಲು ಸೇವೆಯನ್ನು ಕರ್ನಾಟಕ ರಾಜ್ಯೋತ್ಸವದ ದಿನದಂದು ನೀಡಿರುವುದು ಕನ್ನಡ ನಾಡಿಗೆ ದೊರೆತ ವಿಶೇಷ ಕೊಡುಗೆಯಾಗಿದೆ,” ಎಂದು ಅವರು ಹೇಳಿದರು.

ಈ ರೈಲು ಬೆಂಗಳೂರು–ಅನಂತಪುರ–ಗುಂತಕಲ್–ಯಾದಗಿರಿ–ರಾಯಚೂರು–ಕಲಬುರಗಿ–ಸೊಲ್ಲಾಪುರ–ಪುಣೆ–ಕಲ್ಯಾಣ ಮಾರ್ಗವಾಗಿ ಮುಂಬೈಗೆ ಸಂಚರಿಸಲಿದೆ.

ಅತ್ಯಾಧುನಿಕ ಸೌಲಭ್ಯಗಳು, ಸ್ವಯಂಚಾಲಿತ ಬಾಗಿಲುಗಳು, ಪ್ರಯಾಣಿಕರ ಸುರಕ್ಷತೆಗಾಗಿ ಕವಚ್ ಸುರಕ್ಷತಾ ವ್ಯವಸ್ಥೆ ಹಾಗೂ ಆರಾಮದಾಯಕ ಮಲಗುವ ವ್ಯವಸ್ಥೆಯನ್ನು ಹೊಂದಿರುವ ವಂದೇ ಭಾರತ್ ಸ್ಲೀಪರ್ ರೈಲು, ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲಿದೆ. ಈ ಸೇವೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಎರಡು ಮಹಾನಗರಗಳ ನಡುವಿನ ಆರ್ಥಿಕ, ವಾಣಿಜ್ಯ ಹಾಗೂ ಸಾಮಾಜಿಕ ಸಂಪರ್ಕಕ್ಕೂ ಮತ್ತಷ್ಟು ಉತ್ತೇಜನ ದೊರೆಯಲಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ, ಕೇಂದ್ರ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ವಿ. ಸೋಮಣ್ಣ, ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ, ಲೋಕಸಭಾ ಸದಸ್ಯರಾದ  ಪಿ. ಸಿ. ಮೋಹನ್ ಹಾಗೂ  ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯರಾದ  ಲೇಹರ್ ಸಿಂಗ್ ಸಿರೋಯಾ ಹಾಗೂ  ಜಗ್ಗೇಶ್, ಸೇರಿದಂತೆ ಹಲವು ಗಣ್ಯರು, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now