ವಿಜಯ ದರ್ಪಣ ನ್ಯೂಸ್…
ಕನ್ನಡ ಸ್ನೇಹ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ : ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

ತಾಂಡವಪುರ ನವಂಬರ್ 3 ದಕ್ಷಿಣ ಕಾಶಿ ನಂಜನಗೂಡಿನ ಚಿದಂಬರಂ ಲೇಔಟ್ನಲ್ಲಿ ಕನ್ನಡ ಸ್ನೇಹ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಶಾಸಕ ದರ್ಶನ್ನ ಧ್ರುವನಾರಾಯಣ್ ತಾಯಿ ಕನ್ನಡಾಂಬೆ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ, ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ, ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ, ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಕನ್ನಡ ಭಾಷೆಯ ಶ್ರೀಮಂತ ಪರಂಪರೆ, ಸಂಸ್ಕೃತಿ ಮತ್ತು ನೆಲದ ಅಸ್ಮಿತೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಕನ್ನಡಪರ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಕನ್ನಡದ ಅಭಿಮಾನ ಪ್ರತಿಯೊಬ್ಬರಲ್ಲೂ ಸದಾ ಜೀವಂತವಾಗಿರಲಿ ಎಂಬ ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ರವರು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಿನ್ನದ ಗುಡಿ ಹುಂಡಿ ಬಸವೇಗೌಡ, ಪ್ರಕಾಶ್, ಸತ್ಯನಾರಾಯಣ್ ಸೇರಿದಂತೆ ಹಲವು ಕನ್ನಡ ಸ್ನೇಹ ಬಳಗದ ಮುಖಂಡರುಗಳು ಅಭಿಮಾನಿಗಳುಮುಖಂಡರು ಹಾಗೂ ಬಡಾವಣೆಯ ನಿವಾಸಿಗಳು ಹಾಜರಿದ್ದರು











