--Ads--

ದಾವೂದ್ ಇಬ್ರಾಹಿಂ ವೈಭವೀಕರಿಸಿದ ಪ್ರವಾಸಿ ಬಸ್ ಪೊಲೀಸರ ವಶಕ್ಕೆ

On: November 7, 2026 7:12 AM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್……

ದಾವೂದ್ ಇಬ್ರಾಹಿಂ ವೈಭವೀಕರಿಸಿದ ಪ್ರವಾಸಿ ಬಸ್ ಪೊಲೀಸರ ವಶಕ್ಕೆ

 

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಪ್ರವಾಸಿ ಬಸ್ಸಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ಬರಹ ಪತ್ತೆಯಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಬಸ್ಸಿನ ಮೇಲೆ ಇಂಗ್ಲಿಷ್‌ನಲ್ಲಿ ‘Dawood Rise of Day’ ಹಾಗೂ ‘Emperor Strikes Again’ ಎಂಬ ಬರಹಗಳನ್ನು ಬರೆಯಲಾಗಿತ್ತು. ಇದನ್ನು ಗಮನಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಬಸ್ಸನ್ನು ಅಡ್ಡಗಟ್ಟಿದ್ದಾರೆ.

ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇವಾಲಯದ ಸಮೀಪ ಬಸ್ಸನ್ನು ತಡೆದು ನಿಲ್ಲಿಸಿದ ಕಾರ್ಯಕರ್ತರು, ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ರೀತಿಯ ಬರಹಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ನಗರ ಠಾಣೆ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆರು ತಿಂಗಳ ಹಿಂದೆಯೂ ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ಬಸ್ಸಿನಲ್ಲಿ ಇದೇ ರೀತಿಯ ವಿವಾದಾತ್ಮಕ ಬರಹ ಪತ್ತೆಯಾಗಿತ್ತು. ಇದೀಗ ಕೇರಳ ಮೂಲದ ಮತ್ತೊಂದು ಬಸ್ಸಿನಲ್ಲೂ ಇಂತಹ ಬರಹ ಕಾಣಿಸಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೊಲೀಸ್ ಇಲಾಖೆಯ ಭದ್ರತಾ ವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ. ಹತ್ತಾರು ಚೆಕ್‌ಪೋಸ್ಟ್‌ಗಳನ್ನು ದಾಟಿ ಇಂತಹ ಬರಹಗಳನ್ನು ಹೊಂದಿರುವ ಬಸ್ ನಗರಕ್ಕೆ ಹೇಗೆ ಪ್ರವೇಶಿಸಿತು ಎಂದು ಪ್ರಶ್ನಿಸಿರುವ ಅವರು, ದೇಶವಿರೋಧಿ ಕೃತ್ಯಗಳನ್ನು ಬೆಂಬಲಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಯುವ ಮೋರ್ಚಾ ಎಚ್ಚರಿಕೆ ನೀಡಿದೆ.

 

WhatsApp

Join Now

Telegram

Join Now

Instagram

Join Now