--Ads--

ಮೂಲಸೌಕರ್ಯಗಳ ಕೊರತೆ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು : ಶಾಸಕ ಬಿ.ಎನ್.ರವಿಕುಮಾ‌ರ್

On: November 7, 2026 2:38 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಮೂಲಸೌಕರ್ಯಗಳ ಕೊರತೆ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು : ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪದಂತಹ ಮೂಲಸೌಕರ್ಯಗಳ ಕೊರತೆ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಜನರ ಸಮಸ್ಯೆಗಳಿಗೆ ಆದ್ಯತೆ ನೀಡಿ, ಮುಂದಿನ ಶನಿವಾರದೊಳಗೆ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಬಿ.ಎನ್.ರವಿಕುಮಾ‌ರ್ ಸೂಚಿಸಿದರು.

ತಾಲ್ಲೂಕಿನ ಸಾದಲಿ ಹೋಬಳಿಯ ಎಸ್.ದೇವಗಾನಹಳ್ಳಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಪಂಚಾಯಿತಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸ್ಪಂದನ ಮತ್ತು ಪ್ರಜಾಸೇವಾ ಆಂದೋಲನ ಕಾರ್ಯಕ್ರಮಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪರಿಣಾಮಕಾರಿ ವೇದಿಕೆಗಳಾಗಬೇಕು ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಅನಗತ್ಯ ಅಲೆದಾಟ ತಪ್ಪಿಸಬೇಕು, ಜನರು ಸಲ್ಲಿಸುವ ಪ್ರತಿ ಅಹವಾಲಿಗೂ ಸೂಕ್ತ ಸ್ಪಂದನೆ ನೀಡಿ ಪರಿಹರಿಸಬೇಕು ಎಂದು ಹೇಳಿದರು.

ಸರ್ಕಾರಿ ಕಚೇರಿಗಳಿಗೆ ಅಲೆದಾಡದೆ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ವಿವಿಧ ಇಲಾಖೆಗಳ ಸೇವೆಗಳು ಜನರಿಗೆ ಸಿಗಬೇಕು ಎಂಬ ಉದ್ದೇಶದಿಂದ ಆಡಳಿತವನ್ನು ಜನರ ಬಳಿಗೇ ತಂದು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವುದು ಇದರ ಮುಖ್ಯ ಆಶಯ ಎಂದರು.

ಇದೇ ವೇಳೆ ಗ್ರಾಮಸ್ಥರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲು ಪತ್ರಗಳನ್ನು ಸ್ವೀಕರಿಸಲಾಯಿತು ,ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ) ಅಡಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳು ದೀಪಾವಳಿ ಹಬ್ಬದ ಪ್ರಯುಕ್ತ ಸಿದ್ಧಪಡಿಸಿದ ದೀಪ ಸಂಜೀವಿನಿ ಕಿಟ್‌ಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಮಳಿಗೆಗಳನ್ನು ತೆರೆಯಲಾಗಿತ್ತು.

ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿತು, ವಿಬಿ-ಜಿ-ರಾಮ್-ಜಿ ಯೋಜನೆಯ ಉದ್ದೇಶ, ಅನುಷ್ಠಾನ ಮತ್ತು ಸೌಲಭ್ಯಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಎನ್.ಗಗನಸಿಂಧು ,
ತಾಲ್ಲೂಕು ಪಂಚಾಯಿತಿ ಇಒ.ಹೇಮಾವತಿ.ಆರ್.
ಜಿಲ್ಲಾ ಭೂ ದಾಖಲೆಗಳ ಉಪನಿರ್ದೇಶಕ ಮಂಜುನಾಥ, ಗ್ರೇಡ್-2 ತಹಶೀಲ್ದಾರ್ ಮಂಜುನಾಥ, ಮುಖಂಡ  ಡಾ.ದನಂಜಯರೆಡ್ಡಿ, ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ , ಐಇಸಿ ಸಂಯೋಜಕ ಲೋಕೇಶ್, ಸಾದಲಿ ಹೋಬಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಎನ್‌ಆರ್‌ಎಲ್‌ಎಂ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now