--Ads--

ಪ್ರಜಾಪ್ರಭುತ್ವದ ಅರಿವು ಮೂಡಿಸಲು ಯುವ ಸಂಸತ್ ಉತ್ತಮ ವೇದಿಕೆ : ಜಿಲ್ಲಾಧಿಕಾರಿ

On: November 12, 2026 4:05 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ

ಪ್ರಜಾಪ್ರಭುತ್ವದ ಅರಿವು ಮೂಡಿಸಲು ಯುವ ಸಂಸತ್ ಉತ್ತಮ ವೇದಿಕೆ : ಜಿಲ್ಲಾಧಿಕಾರಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.12:

ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳು. ಇಂದಿನ ಮಕ್ಕಳು ನಾಳಿನ ಜವಾಬ್ದಾರಿಯುತ ನಾಗರಿಕರಾಗಬೇಕಾದರೆ ಅವರಿಗೆ ಬಾಲ್ಯದಿಂದಲೇ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು, ನಾಯಕತ್ವದ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಕ್ಕಳ ಯುವ ಸಂಸತ್ತು ಕಾರ್ಯಕ್ರಮಕ್ಕೆ ಇಂದು ಜಿಲ್ಲಾಡಳಿತ ಭವನ ಸಾಕ್ಷಿಯಾಯಿತು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಯುವ ಸಂಸತ್ತು ಸಭೆ ಆಯೋಜಿಸಲಾಗಿತ್ತು.

ಇಲ್ಲಿ ಮಕ್ಕಳು ಸಭಾಧ್ಯಕ್ಷರು, ಮುಖ್ಯಮಂತ್ರಿ, ಸಚಿವರು, ವಿರೋಧ ಪಕ್ಷದ ನಾಯಕರು, ಶಾಸಕರು ಹೀಗೆ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ರಾಜ್ಯದ ಸಮಸ್ಯೆಗಳು, ಶಿಕ್ಷಣ, ಆರೋಗ್ಯ, ಕೃಷಿ, ಅಭಿವೃದ್ಧಿ ಯೋಜನೆಗಳು, ಮಕ್ಕಳ ಹಕ್ಕುಗಳು ಹಾಗೂ ಮಹಿಳಾ ಸಬಲೀಕರಣದಂತಹ ವಿಷಯಗಳ ಕುರಿತು ಚರ್ಚಿಸಿದರು.

ಮಕ್ಕಳ ಸಂಸತ್ ಅಧಿವೇಶನವನ್ನು ಪ್ರೇಕ್ಷಕರ ಗ್ಯಾಲರಿಯಲ್ಲಿ ಕೂತು ಜಿಲ್ಲಾಧಿಕಾರಿ ವೀಕ್ಷಿಸಿದರು. ಜೊತೆಗೆ ಮಕ್ಕಳ ವಾಕ್ ಚಾತುರ್ಯ, ಮಾತಿನ ಚಕಮಕಿ ಕಂಡು ಜಿಲ್ಲಾಧಿಕಾರಿ, ಅಧಿಕಾರಿಗಳು ಖುಷಿ ಪಟ್ಟರು.

ಮಕ್ಕಳ ಯುವ ಸಂಸತ್ತಿನಿಂದ ಅನೇಕ ಪ್ರಯೋಜನಗಳಿವೆ. ಮಕ್ಕಳಲ್ಲಿ ನಾಯಕತ್ವದ ಗುಣ, ಆತ್ಮವಿಶ್ವಾಸ, ವಾಕ್ಚಾತುರ್ಯ, ಪ್ರಶ್ನಿಸುವ ಮನೋಭಾವ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ತಂಡದೊಂದಿಗೆ ಕೆಲಸ ಮಾಡುವ ಕೌಶಲಗಳು ಬೆಳೆಯುತ್ತವೆ. ಇತರರ ಅಭಿಪ್ರಾಯಗಳನ್ನು ಗೌರವಿಸುವುದು, ಭಿನ್ನಮತವನ್ನು ಸ್ವೀಕರಿಸುವುದು ಮತ್ತು ಚರ್ಚೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಮುಂತಾದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮಕ್ಕಳು ಕಲಿಯುತ್ತಾರೆ.

ಇಂದಿನ ಸಮಾಜದಲ್ಲಿ ಮಕ್ಕಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಶಾಲೆಗಳಲ್ಲಿ ಮಕ್ಕಳ ಯುವ ಸಂಸತ್ತನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಮೂಲಕ ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಅವರಲ್ಲಿ ಬಿತ್ತಬಹುದು. ಶಿಕ್ಷಕರು ಮಾರ್ಗದರ್ಶಕರಾಗಿ ಮಕ್ಕಳಿಗೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ನೀಡಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶ.

ಮಕ್ಕಳ ಅಭಿಪ್ರಾಯಗಳಿಗೆ ಮನ್ನಣೆ ನೀಡುವ ಸಮಾಜವೇ ನಿಜವಾದ ಪ್ರಜಾಪ್ರಭುತ್ವದ ಸಮಾಜ. ಮಕ್ಕಳ ಯುವ ಸಂಸತ್ತು ಅವರಲ್ಲಿ ಪ್ರಶ್ನಿಸುವ ಧೈರ್ಯವನ್ನಷ್ಟೇ ಅಲ್ಲ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಜವಾಬ್ದಾರಿಯನ್ನೂ ಬೆಳೆಸುತ್ತದೆ.

ಮಕ್ಕಳ ಯುವ ಸಂಸತ್ತು ನಾಳಿನ ಉತ್ತಮ ನಾಯಕರು, ಜವಾಬ್ದಾರಿಯುತ ನಾಗರಿಕರು ಮತ್ತು ಜಾಗೃತ ಸಮಾಜ ನಿರ್ಮಾತೃಗಳನ್ನು ರೂಪಿಸುವ ಪ್ರಬಲ ಸಾಧನವಾಗಿದೆ. ಮಕ್ಕಳ ಧ್ವನಿಗೆ ವೇದಿಕೆ ನೀಡೋಣ, ಅವರ ಆಲೋಚನೆಗಳಿಗೆ ಅವಕಾಶ ಕಲ್ಪಿಸೋಣ. ಏಕೆಂದರೆ ಇಂದಿನ ಮಕ್ಕಳೇ ನಾಳಿನ ಸದೃಢ ಪ್ರಜಾಪ್ರಭುತ್ವದ ಶಿಲ್ಪಿಗಳು.

ಯುವ ಸಂಸತ್ತು ಎಂದರೆ ಕೇವಲ ಸಭೆ ನಡೆಸುವುದು ಅಥವಾ ಭಾಷಣ ಮಾಡುವುದಲ್ಲ. ಇದು ಮಕ್ಕಳಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆ, ಸಂಸದೀಯ ಕಾರ್ಯವೈಖರಿ ಮತ್ತು ಆಡಳಿತದ ಜವಾಬ್ದಾರಿಗಳ ಬಗ್ಗೆ ಪ್ರಾಯೋಗಿಕ ತಿಳಿವಳಿಕೆ ಮೂಡಿಸುವ ಒಂದು ವಿಶಿಷ್ಟ ಚಟುವಟಿಕೆಯಾಗಿದೆ- ಡಾ. ಕೆ.ಎನ್ ಅನುರಾಧ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ

ಕಾರ್ಯಕ್ರಮದಲ್ಲಿ ಉಪಕಾರ್ಯದರ್ಶಿ ಶಿವಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹನುಮತರಾಯಪ್ಪ ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಪದವಿ ಪೂರ್ವ ಶಿಕ್ಷಣ ಇಲಾಖೆ ಸುದೀಪ್, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now