ವಿಜಯ ದರ್ಪಣ ನ್ಯೂಸ್…….
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ್ ರವರ ಸಮ್ಮುಖದಲ್ಲಿ ಸಚಿವರ ಜೊತೆಯಲ್ಲಿ ಮಹತ್ವದ ಸಭೆ

ತಾಂಡವಪುರ ನವಂಬರ್ 12ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಮುಖ್ಯ ಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರ ಸಮ್ಮುಖದಲ್ಲಿ ಸಚಿವರ ಜೊತೆಯಲ್ಲಿ ನಡೆದ ಮಹತ್ವದ ಸಭೆ ನಡೆಯಿತು
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ಧರಾಮಯ್ಯ ನವರು ಭಾಗವಹಿಸಿ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ, ಸಮಾನ ಅವಕಾಶಗಳ ಸೃಷ್ಟಿ ಮತ್ತು ಅಭಿವೃದ್ಧಿಯ ಫಲಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿ ಮಾಡಿ ಕೆಲವು ವಿಚಾರ ಕುರಿತು ಸಮರಚನೆ ನಡೆಸಿದರು ಅಲ್ಲದೆ
ಸಮಾಜದ ಕಟ್ಟಕಡೆಯ ಸಮುದಾಯಗಳಿಗೂ ಸಮಾನ ಹಕ್ಕು, ಗೌರವ ಹಾಗೂ ಅಭಿವೃದ್ಧಿಯಲ್ಲಿ ಸಮಾನ ಪಾಲು ದೊರೆಯಬೇಕು. ಶಿಕ್ಷಣ, ಉದ್ಯೋಗ, ಆರ್ಥಿಕ ಸ್ವಾವಲಂಬನೆ ಮತ್ತು ಸಾಮಾಜಿಕ ನ್ಯಾಯದ ಮೂಲಕ ಈ ಸಮುದಾಯಗಳನ್ನು ಸಬಲಗೊಳಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಎಂದು ಮುಖ್ಯಮಂತ್ರಿಗಳು ಸಚಿವರು ಹೇಳಿದರು
ಈ ಸಭೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಎನ್ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ, ಸೇರಿದಂತೆ, ಹಲವು ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸದಸ್ಯರುಗಳು ಮುಂತಾದವರು ಹಾಜರಿದ್ದರು










