--Ads--

100 ಹಾಸಿಗೆ ಸಾಮರ್ಥ್ಯದ ನೆಲಮಂಗಲ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಯುಟಿ ಖಾದರ್ ಅವರಿಂದ ಭೂಮಿ ಪೂಜೆ

On: November 13, 2026 1:38 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……..

100 ಹಾಸಿಗೆ ಸಾಮರ್ಥ್ಯದ ನೆಲಮಂಗಲ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಯು ಟಿ ಖಾದರ್ ಅವರಿಂದ ಭೂಮಿ ಪೂಜೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ , ನ.13:

ನೆಲಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನು 39 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಅತ್ಯಾಧುನಿಕ ಸೌಲಭ್ಯಗಳ ಜೊತೆಗೆ 100 ಹಾಸಿಗೆಗಳ ಸಾಮರ್ಥ್ಯದಲ್ಲಿ ರಾಜ್ಯದಲ್ಲಿಯೇ ಮಾದರಿ ತಾಲ್ಲೂಕು ಆಸ್ಪತ್ರೆಯನ್ನಾಗಿ ನಿರ್ಮಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ನೆಲಮಂಗಲ ಟೌನ್ ನ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು

ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಹಾಗೂ ಸುಸಜ್ಜಿತ ಆರೋಗ್ಯ ಸೇವೆಗಳು ತಾಲ್ಲೂಕು ಮಟ್ಟದಲ್ಲೇ ಸಿಗಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ. ಎಲ್ಲ ಸೌಕರ್ಯಗಳೊಂದಿಗೆ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದಷ್ಟೇ ಅಲ್ಲದೇ, ಪ್ರಯೋಗಾಲಯ, ಐಸಿಯು, ಸ್ಕ್ಯಾನಿಂಗ್ ಸೌಕರ್ಯ, ರಕ್ತನಿಧಿ ಕೇಂದ್ರ, ತುರ್ತು ಚಿಕಿತ್ಸೆ, ಪಾರ್ಕಿಂಗ್, ಕುಡಿಯುವ ನೀರು, ಶೌಚಗೃಹ ಸೇರಿದಂತೆ ಎಲ್ಲ ಸೌಕರ್ಯಗಳನ್ನೂ ಒಳಗೊಂಡ ಒಂದು ಸರ್ವಾಂಗೀಣ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ನೆಲಮಂಗಲ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಈ ನೂತನ ಆಸ್ಪತ್ರೆ ವರದಾನವಾಗಲಿದೆ. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ರಾಜ್ಯದಲ್ಲಿ ಶೇಕಡಾ 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೆ, ಅವರ ಗುಣಮಟ್ಟದ ಚಿಕಿತ್ಸೆ, ಔಷಧಿ ನೀಡುವುದು ನಮ್ಮ ಸರ್ಕಾರದ ಕರ್, ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು ಹಂತ ಹಂತವಾಗಿ ಕೆಲಸ ಮಾಡಲಾಗುತ್ತಿದೆ. ಜನರು ಸರ್ಕಾರಿ ಆಸ್ಪತ್ರೆಗೆ ನಂಬಿ ಬಂದಾಗ ಅವರ ವಿಶ್ವಾಸ ಗಳಿಸುವಂತ ಕೆಲಸ ವೈದ್ಯಾಧಿಕಾರಿಗಳು ಮಾಡಬೇಕು ಎಂದರು.

ನೆಲಮಂಗಲದಲ್ಲಿ ರಾಷ್ಟ್ರ, ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಜೊತೆಗೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಅಗತ್ಯಕ್ಕೆ ವೈದ್ಯರು, ಸಿಬ್ಬಂದಿ, ಹಾಸಿಗೆಗಳ ಕೊರತೆ, ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು, ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಸ್ತುತ ಇರುವ ಆಂಬ್ಯುಲೆನ್ಸ್ ಸಾಕಾಗುವುದಿಲ್ಲ ಎಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಂತೆ ಅಗತ್ಯ ದಾಸ್ತಾನು ಶೇಖರಿಸಲು ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ. ಜೊತಗೆ ಸಿಬ್ಬಂದಿ ನೇಮಕ ಹಂತ ಹಂತವಾಗಿ ಮಾಡಲಾಗುವುದು ಎಂದರು.

ಈಗಿನ ಆಸ್ಪತ್ರೆ ಸ್ಥಳಾಂತರ

ನೂತನ ಸರ್ಕಾರಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಗರದ ಮುಖ್ಯಬೀದಿಯಲ್ಲಿನ ವಿಶ್ವೇಶ್ವರಪುರದ ಟಿಬಿಟಿಯನ್ ವಸತಿ ಸಮುಚ್ಚಯಕ್ಕೆ ತಾಲ್ಲೂಕು ಆಸ್ಪತ್ರೆಯನ್ನು ತಾತ್ಕಾಲಿಕ ಸ್ಥಳಾಂತರ ಮಾಡಲು ಉದ್ದೇಶಿಸಲಾಗಿದೆ. ಸರ್ಕಾರಿ ಆಸ್ಪತ್ರೆಯ ಕಟ್ಟಡ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿಯಿಂದ ಹಾಗೂ ಸ್ಥಳಾಂತರಗೊಂಡ ಕಾರಣ ಅಲ್ಲಿನ ಸಿಬ್ಬಂದಿ, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ.

ನೂತನ ಆಸ್ಪತ್ರೆ ಭೂಮಿಪೂಜೆ ಬಳಿಕ ಕಣೇಗೌಡನಹಳ್ಳಿ ಗ್ರಾಮ ಪಂಚಾಯಿತಿಯ ಇಸ್ಲಾಂಪುರ ಗ್ರಾಮದಲ್ಲಿ 5 ಕೋಟಿ ಅನುದಾನದಲ್ಲಿ ಮೌಲಾನ ಆಜಾದ್ ಮಾದರಿ ಶಾಲೆ ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಜಿಲ್ಲಾ ಆರೋಗ್ಯಾಧಿಕಾರಿ ಡಾ ಮಂಜುನಾಥ್ ನೆಲಮಂಗಲ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾರಾಯಣ್ ಗೌಡ, ಎಂ.ಕೆ.ನಾಗರಾಜು,ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ನವಂಬರ್.14 ರಂದು ‘ಪ್ರಜಾಸೇವೆ ಆಂದೋಲನ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ನ. 13:

ನಾಗರೀಕರಿಂದ ಕುಂದುಕೊರತೆಗಳ ಮನವಿ ಸ್ವೀಕರಿಸಿ, ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪ್ರಜಾ ಸೇವಾ ಆಂದೋಲನ ಸಭೆಯು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನವೆಂಬರ್ 14 ರ ಶನಿವಾರದಂದು ಆಯ್ದ ಸ್ಥಳಗಳಲ್ಲಿ ಆಯೋಜಿಸಲಾಗಿದೆ.

ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ದೇವನಹಳ್ಳಿ ತಾಲ್ಲೂಕು ವಿಶ್ವನಾಥಪುರ ಗ್ರಾಮದ ಕೆ.ಪಿ.ಎಸ್ ಶಾಲೆಯಲ್ಲಿ ಆಯೋಜಿಸಲಾಗಿದೆ.

ನೆಲಮಂಗಲ ತಾಲ್ಲೂಕಿನಲ್ಲಿ ಶಾಸಕರಾದ ಎನ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನೆಲಮಂಗಲ ಟೌನ್ ನ ತಾಲ್ಲೂಕು ಕಛೇರಿಯ ಮುಂಭಾಗದಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯನ್ನ ಹಮ್ಮಿಕೊಳ್ಳಲಾಗಿದೆ.

ಹೊಸಕೋಟೆ ತಾಲೂಕಿನಲ್ಲಿ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ಕಸಬಾ ಹೋಬಳಿ ದೊಡ್ಡಹುಲ್ಲೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಧೀರಜ್ ಮುನಿರಾಜ್ ಅವರ ಅಧ್ಯಕ್ಷತೆಯಲ್ಲಿ ಕಸಬಾ ಹೋಬಳಿ ದೊಡ್ಡಬಳ್ಳಾಪುರ ಟೌನ್ ನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.

ಸಾರ್ವಜನಿಕರು ಆಯಾ ತಾಲ್ಲೂಕಿನಲ್ಲಿ ಶನಿವಾರ ನಡೆಯಲಿರುವ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕುಂದು ಕೊರತೆ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now