--Ads--

ಹೊಸಕೋಟೆ ತಾಲೂಕು ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಿಗೆ ದಂಡುಪಾಳ್ಯ ಗ್ರಾಮಸ್ಥರಿಂದ ಸನ್ಮಾನ

On: November 14, 2026 5:45 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಹೊಸಕೋಟೆ ತಾಲೂಕು ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಿಗೆ ದಂಡುಪಾಳ್ಯ ಗ್ರಾಮಸ್ಥರಿಂದ ಸನ್ಮಾನ

ತಾವರೆಕೆರೆ:ಹೊಸಕೋಟೆ ತಾಲೂಕು ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ವಿ. ಬೈರೇಗೌಡ ಅವರಿಗೆ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ಗ್ರಾಮಸ್ಥರು ಹಾಗೂ ಯುವಕರ ವತಿಯಿಂದ ವಿಶೇಷ ಗೌರವ ಸಮರ್ಪಣೆ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಅರುಣ್ ಮಾತನಾಡಿ, ಹೊಸಕೋಟೆ ತಾಲೂಕಿನಲ್ಲಿ ಈಗಾಗಲೇ ಶಾಸಕರಾದ ಶರತ್ ಬಚ್ಚೇಗೌಡರು ಹಾಗೂ ಮಾಜಿ ಸಂಸದರಾದ ಬಿ.ಎನ್. ಬಚ್ಚೇಗೌಡ ಅವರ ಮಾರ್ಗದರ್ಶನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಯಶಸ್ವಿಯಾಗಿ ನಡೆದಿದ್ದು, ಇನ್ನೂ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಬಿ.ವಿ. ಬೈರೇಗೌಡ ಅವರು ನಗರ ವ್ಯಾಪ್ತಿಯಲ್ಲಿ ಹಲವು ಸಮಾಜಮುಖಿ ಕಾರ್ಯಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಇದೀಗ ಅವರಿಗೆ ತಾಲೂಕು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ದೊರೆತಿರುವುದರಿಂದ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆಯಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

ಅಲ್ಲದೆ, ಅವರ ಮಾರ್ಗದರ್ಶನದಲ್ಲಿ ನಮ್ಮಂತಹ ಯುವಕರು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಗ್ರಾಮದ ಹಾಗೂ ತಾಲೂಕಿನ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೊಸಕೋಟೆ ತಾಲೂಕು ಎಚ್.ಎಂ. ಸುಬ್ಬರಾಜು ಅವರ ಅಭಿಮಾನಿ ಬಳಗದ ಸದಸ್ಯರು, ದಂಡುಪಾಳ್ಯ ಗ್ರಾಮದ ನಾಗರಾಜ್, ಪತ್ರ ಬರಹಗಾರ ಮುನಿಯಪ್ಪ, ಮೈಲಾರಪ್ಪ, ಅನಿಲ್, ಶ್ರೀನಿವಾಸ್ (ಆಂಬುಲೆನ್ಸ್), ಗ್ರಾಮದ ಯುವಕರು ಹಾಗೂ ಮುಖಂಡರು ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

WhatsApp

Join Now

Telegram

Join Now

Instagram

Join Now