--Ads--

ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು, ಪಾಲಕರ ಜವಾಬ್ದಾರಿಯಾಗಿದೆ : ಬಿಇಒ ಪಿ.ಸ್ವಾಮಿ

On: November 18, 2026 5:56 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…….

ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು, ಪಾಲಕರ ಜವಾಬ್ದಾರಿಯಾಗಿದೆ : ಬಿಇಒ ಪಿ.ಸ್ವಾಮಿ

ಶಿಡ್ಲಘಟ್ಟ : ಪ್ರತಿ ವ್ಯಕ್ತಿಯಲ್ಲಿಯೂ ಒಂದೊಂದು ವಿಶಿಷ್ಟ ಪ್ರತಿಭೆ ಅಡಗಿರುತ್ತದೆ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು, ಪಾಲಕರುಹಾಗೂ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ ತಿಳಿಸಿದರು.

ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತುಮ್ಮನಹಳ್ಳಿ ಕ್ಲಸ್ಟ‌ರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಕಲೆ, ಸಾಹಿತ ಸಂಗೀತ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆಯಾಗಿವೆ ಎಂದರು.

ಗ್ರಾಮೀಣ ಭಾಗದ ಬಹುತೇಕ ಜನರು ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪಡೆದುಕೊಳ್ಳಲು ಆಸಕ್ತಿ ತೋರುತ್ತಾರೆ ಆದರೆ, ಸರ್ಕಾರಿ ಶಾಲೆಗಳ ವಿಚಾರದಲ್ಲಿ ಕೆಲವರು ನಿರ್ಲಕ್ಷ್ಯ ವಹಿಸುತ್ತಿರುವುದು ವಿಷಾದನೀಯ ಎಂದರು.

ಇಂದಿನ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಪಾಠ-ಪ್ರವಚನ ಭಾಷೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ನುರಿತ ಶಿಕ್ಷಕದ ಮಾರ್ಗದರ್ಶನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ರೂಪುಗೊಳ್ಳುತ್ತಿದ್ದಾರೆ ಹಾಗಾಗಿ ಪಾಲಕರು ಸರ್ಕಾರಿ ಶಾಲೆಗಳ ಬಗ್ಗೆ ಅಭಿಮಾನ ಮತ್ತು ವಿಶ್ವಾಸ ಬೆಳೆಸಿಕೊಂಡು ತಮ್ಮ ಮಕ್ಕಳನ್ನು ಸರ್ಕಾರಿದ ಶಾಲೆಗಳಿಗೆ ದಾಖಲಿಸಬೇಕು ಎಂದು ನುಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಮ್ಮ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಠ್ಯಪುಸ್ತಕದ ಶಿಕ್ಷಣದ ಜತೆಗೆ ಸಹಪಠ್ಯ ಚಟುವಟಿಕೆಗಳು ಅತ್ಯಗತ್ಯ , ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿರುವುದು ಸಂತಸದ ಸಂಗತಿ ಎಂದರು.

ಇದೇ ವೇಳೆ ಮಣ್ಣಿನ ಕಲೆ, ಚಿತ್ರಕಲೆ, ಪ್ರಬಂಧ ಸ್ಪರ್ಧೆ, ಭಕ್ತಿಗೀತೆ, ಭಾವಗೀತೆ, ಕಂಠಪಾಠ ಸೇರಿದಂತೆ ಒಟ್ಟು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ತುಮ್ಮನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಗೌತಮ್, ಸಿಆರ್‌ಪಿ ಬಾಬು, ತುಮ್ಮನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು ಹಾಗೂ ಶಿಕ್ಷಕಿಯರು, ಬಿಆರ್‌ಸಿ ಅಧಿಕಾರಿಗಳು, ಶಾಲಾ ಸಿಬ್ಬಂದಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now