ವಿಜಯ ದರ್ಪಣ ನ್ಯೂಸ್….
ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆ ಮತ್ತು ಇಲಾಖೆಗಳ ಪ್ರಗತಿ ಪರಿಶೀಲನೆ

ಶಿಡ್ಲಘಟ್ಟ : ಯೋಜನೆಗಳ ಉದ್ದೇಶ ಮತ್ತು ಅವುಗಳಿಂದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವುದು ಅಧಿಕಾರಿಗಳ ಆದ್ಯತೆಯಾಗಬೇಕು
ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಸ್.ಎಸ್.ಅಬಿದ್ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ನಡೆದ ಸಾಮಾನ್ಯ ಸಭೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಕೃಷಿ, ಬೆಸ್ಕಾಂ, ಕುಡಿಯುವ ನೀರು, ವಿದ್ಯುತ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳು ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಹೇಳಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿ ಮಾತನಾಡಿ ,ಡಿಸೆಂಬರ್ 1ರಿಂದ ಡಿಎಪಿ, ಯೂರಿಯಾ ಸೇರಿದಂತೆ ಎಲ್ಲ ಬಗೆಯ ರಸಗೊಬ್ಬರ ಖರೀದಿಗೆ ರೈತರ ಎಫ್.ಐ.ಡಿ. ಕಡ್ಡಾಯವಾಗಲಿದೆ ಎಂದರು.
ರೈತರು ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್‌ಬುಕ್ ಹಾಗೂ ಆಧಾರ್‌ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯೊಂದಿಗೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಫ್.ಐ.ಡಿ. ಮಾಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ, ಅನುಷ್ಠಾನದಲ್ಲಿರುವ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು,ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆ, ಕೃಷಿ ಇಲಾಖೆಯ ಯೋಜನೆಗಳು ಹಾಗೂ ಪಡಿತರ ವಿತರಣೆ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಹೇಮಾವತಿ , ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.










