ವಿಜಯ ದರ್ಪಣ ನ್ಯೂಸ್….
ನವೆಂಬರ್ 26ರಂದು ಮೈಸೂರಿನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಸಿದ್ಧತೆಗಳ ಕುರಿತು ಸಿದ್ದರಾಮಯ್ಯ ನವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ

ತಾಂಡವಪುರ ನವಂಬರ್ 19ನವೆಂಬರ್ 26ರಂದು ಮೈಸೂರಿನಲ್ಲಿ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಸಿದ್ಧತೆಗಳ ಕುರಿತು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರವರು ಸಚಿವರು ಶಾಸಕರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಿ ಸಂವಿಧಾನ ದಿನಾಚರಣೆ ಯಶಸ್ವಿಯಾಗಿ ನಡೆಯಲು ಎಲ್ಲರೂ ಸಹಕಾರ ನೀಡಬೇಕು ಶ್ರಮವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಜನ ಭಾಗವಹಿಸಲಿದ್ದಾರೆ. 1.5 ಕಿ.ಮೀ. ಪಾದಯಾತ್ರೆಯ ಮೂಲಕ ಕಾರ್ಯಕ್ರಮದ ಸ್ಥಳವನ್ನು ತಲುಪುವಂತೆ ರೂಪುರೇಷೆಗಳನ್ನು ಸಿದ್ಧಪಡಿಸುವ ಕುರಿತು ಚರ್ಚಿಸಲಾಯಿತು.
ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸುವ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರ ಅಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯ ರವರು ಸಚಿವ ಪಿಎಂ ನರೇಂದ್ರಸ್ವಾಮಿ, ಜಲಸಂನ್ಮೂಲ ಸಚಿವ ಚಲುವರಾಯಸ್ವಾಮಿ, ಅಬಕಾರಿ ಸಚಿವ ಶಿವಲಿಂಗೇಗೌಡ, ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು ಸದಸ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಭೆಯಲ್ಲಿ ಭಾಗಿಯಾಗಿದ್ದರು










