--Ads--

ತಾಲ್ಲೂಕು ಆಡಳಿತದ ವಿರುದ್ದ ‌ನ.23 ರಂದು ಪ್ರತಿಭಟನೆ: ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಎ.ಚಲಪತಿ

On: November 20, 2026 2:03 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತಾಲ್ಲೂಕು ಆಡಳಿತದ ವಿರುದ್ದ ‌ನ.23 ರಂದು ಪ್ರತಿಭಟನೆ: ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಎ.ಚಲಪತಿ

ಶಿಡ್ಲಘಟ್ಟ : ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಈವರೆಗೂ ಕ್ಷೇತ್ರದ ದಲಿತರಿಗೆ ವಾಸಿಸಲು ಸೂರು, ಓಡಾಡಲು ರಸ್ತೆ, ಸತ್ತರೆ ಹೂಳಲು ಸ್ಮಶಾನದಂತಹ ಸವಲತ್ತು ಕಲ್ಪಿಸಲು ತಾಲ್ಲೂಕು ಆಡಳಿತ ವಿಫಲವಾಗಿದೆ
ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಎ.ಚಲಪತಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು. ತಾಲ್ಲೂಕು ಆಡಳಿತದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ನ.23ರಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದ ಅವರು ತಹಸೀಲ್ದಾರ್ ಅವರಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಬದಲಿಗೆ ಈಗಿರುವ ತಹಸೀಲ್ದಾರರಿಗೆ ದಲಿತರೆಂದರೆ ಅಸಡ್ಡೆ ಎಂದು ಬೇಸರ ವ್ಯಕ್ತಪಡಿಸಿದರು.

ದಲಿತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಅವರ ಬಳಿ ಸಮಯವಿಲ್ಲ ಕರೆ ಮಾಡಿದರೆ ಕರೆ ಸ್ವೀಕರಿಸದೇ ನಿರ್ಲಕ್ಷ್ಯ ಮಾಡುವುದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ತಾಲ್ಲೂಕು ಸಂಚಾಲಕ ಲಕ್ಕೇನಹಳ್ಳಿ ವೆಂಕಟೇಶ್ ಮಾತನಾಡಿ, ತಾಲೂಕಿನಾದ್ಯಂತ ದಲಿತ ಕೇರಿಗಳಲ್ಲಿ ವಾಸಿಸುತ್ತಿರುವ ನಿವೇಶನ ರಹಿತರಿಗೆ ಕೂಡಲೇ ನಿವೇಶನ ನೀಡುವುದು ಸೇರಿ ದರಖಾಸ್ತು ಸಮಿತಿ ರಚಿಸಿ ಫಾರಂ 53 ಹಾಗು 57 ಹಾಕಿರುವ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕ ಲಕ್ಕೇನಹಳ್ಳಿ ವೆಂಕಟೇಶ್‌, ಸಂಘಟನಾ ಸಂಚಾಲಕ ಹುಜಗೂರು ವೆಂಕಟೇಶ್, ನರಸಿಂಹಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now