ವಿಜಯ ದರ್ಪಣ ನ್ಯೂಸ್….
ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ : ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ

ಶಿಡ್ಲಘಟ್ಟ : ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ ತಿಳಿಸಿದರು.
ನಗರ ಹೊರವಲಯದ ಬೂದಾಳ ಬಳಿಯ ರಾಯಲ್ ಇಂಗ್ಲಿಷ್ ಪಬ್ಲಿಕ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಸಬಾ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸ್ಪರ್ಧಾ ಮನೋಭಾವವನ್ನು ಹೆಚ್ಚಿಸುವುದರ ಜತೆಗೆ ಅವರಲ್ಲಿನ ಪ್ರತಿಭೆ ಅನಾವರಣಗೊಳಿಸಲು ಸಹಕಾರಿಯಾಗಿದೆ ,ಶಿಕ್ಷಣ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗಬಾರದು ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ, ಕಲಾತ್ಮಕ ಅಭಿರುಚಿ ಹಾಗೂ ಅಭಿವ್ಯಕ್ತಿ ಕೌಶಲಗಳನ್ನು ಗುರುತಿಸಿ ಬೆಳೆಸುವುದು ಅಗತ್ಯ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಹೋಬಳಿಯ 22 ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶಿಸಿದರು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಂಸಾ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅನುದಾನರಹಿತ ಶಾಲೆಗಳ ಪರವಾಗಿ ರಾಮಚಂದ್ರರೆಡ್ಡಿ, ಶಿಕ್ಷಕ ಎಲ್.ವಿ.ವೆಂಕಟರೆಡ್ಡಿ ,ರಾಯಲ್ ಇಂಗ್ಲಿಷ್ ಪಬ್ಲಿಕ್ ಸ್ಕೂಲ್ನ ವ್ಯವಸ್ಥಾಪಕ ನಿರ್ದೇಶಕ ದೇವರಾಜ್(ದೇವಿ) ಮುಖ್ಯಶಿಕ್ಷಕ ಮಂಜುನಾಥ್,
ಮುಂತಾದವರು ಹಾಜರಿದ್ದರು.










