--Ads--

ಕನಕದಾಸರ ಜಯಂತಿ ಮತ್ತು ಕಾರ್ತಿಕ ದೀಪೋತ್ಸವ 

On: November 25, 2026 11:19 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…….

ಕನಕದಾಸರ ಜಯಂತಿ ಮತ್ತು ಕಾರ್ತಿಕ ದೀಪೋತ್ಸವ 

 

ವಿಜಯಪುರ: ಕನಕದಾಸರ ಮೂಲ ಹೆಸರು (ತಿಮ್ಮಪ್ಪನಾಯಕ) (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ ಹರಿಭಕ್ತರಾದರಂತೆ. ಎಂದು ಕೋರಮಂಗಲ ಗ್ರಾಮದ ಶಿವಕುಮಾರ್ ತಿಳಿಸಿದರು.

ವಿಜಯಪುರ ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹ ಕನ್ವೆನ್ಷನ್ ಹಾಲ್ ನಲ್ಲಿ ಶ್ರೀ ಕೃಷ್ಣ ಯತೀಂದ್ರ ಸತ್ಸಂಗ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಶ್ರೀ ಶ್ರೀಮದ್ ಭಗವದ್ಗೀತಾ ಪಾರಾಯಣ ಶ್ರೀ ಶ್ರೀ ಶ್ರೀ ಕೈವಾರ ಯೋಗಿ ನಾರೇಯಣ ಯತೀಂದ್ರರ ಹಾಗೂ ಕನಕ ಪುರಂದರ ಗೀತಾ ತತ್ವಾಮೃತ ರಸದಾರಿಯ 257ನೇ ಕಾರ್ಯಕ್ರಮ ಹಾಗೂ ಶ್ರೀ ಕೃಷ್ಣ ಮಾಸಿಕ ದ್ವಾದಶಿ ವಿಚಾರಗೋಷ್ಠಿಯ 2೦8ನೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಶ್ರೀಮತಿ ಶಶಿಕಲಾಮ್ಮ ಅಶ್ವಥ್ ಗುರೂಜಿ ಅವರು ಮಾತನಾಡುತ್ತಾ ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಹಿಂದೂ ಕುರುಬ/ನಾಯಕ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಒಂದು ಜಾತಿಗೇ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15 – 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ ಸುಮಾರು 25 ವರ್ಷಗಳಿಂದ ಸತ್ಸಂಗವನ್ನು ಯಾವುದೇ ಅನುದಾನ ಇಲ್ಲದೆ ನಡೆಸಿಕೊಂಡು ಬಂದಿರುವುದಕ್ಕೆ ತಮ್ಮ ಸಂತಸ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾದ ರವಿಚಂದ್ರ ಗುರೂಜಿ ಸಿರಿಧಾನ್ಯಗಳ ಬಗ್ಗೆ ಮತ್ತು ತರಕಾರಿಗಳ ಬಗ್ಗೆ ಉಪಯೋಗಿಸುವ ಬಗ್ಗೆ ತಿಳಿಯ ಪಡಿಸುತ್ತಾ
ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ: ಮೋಹನತರಂಗಿಣಿ
ನಳಚರಿತ್ರೆ,ರಾಮಧಾನ್ಯ ಚರಿತೆ ಹರಿಭಕ್ತಿಸಾರ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಜೆಎಸ್ ರಾಮಚಂದ್ರಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು. ರಮೇಶ್ ಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಿದ್ದರು

ಕಾರ್ಯಕ್ರಮದಲ್ಲಿ ವಿ ಎನ್ ವೆಂಕಟೇಶ್. ಆರ್. ಮುನಿರಾಜು,ಅನಿತ ರಾಮದಾಸ್, ಯದುಕುಮಾರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಮಹಾತ್ಮಆಂಜನೇಯ, ನರಸಿಂಹಪ್ಪ, ನಾಗರತ್ನಮ್ಮಮತ್ತು ಮುನಿರಾಜು ಸಂಕೀರ್ತನೆ ಮತ್ತು ಶ್ರೀ ಅಶ್ವಥ್ ಗುರೂಜೀ ಬಳಗ. ಭಜನೆಯನ್ನು ಏರ್ಪಡಿಸಲಾಗಿತ್ತು

ಐದು ಜನ ಮಹಿಳೆಯರಿಗೆ ಕಂಬಳಿಗಳು ಮುತ್ತೈದೆಯರಿಗೆ ಅರಿಶಿನ ಕುಂಕುಮ, ಮುತ್ತೈದೆಯರಿಗೆ ಸೀರೆ ಕುಪ್ಪಸ ,ಐದು ಜನ ಮಕ್ಕಳಿಗೆ ಶಾಲೆಯ ಬ್ಯಾಗ್ ವಿತರಣೆ ಮತ್ತು ಭಗವದ್ಗೀತೆಯ ಪುಸ್ತಕಗಳನ್ನು ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳಿಂದ ದೀಪಗಳನ್ನು ಹಚ್ಚಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಭಕ್ತಿ ಸೇವೆಯನ್ನು ಶ್ರೀಮತಿ ಭಾರತಿ ಮತ್ತು ಸಿಎನ್ ಸುರೇಶ್ ನಾಯ್ಡು ಮತ್ತು ಮಕ್ಕಳು ನೆರವೇರಿಸಿದರು.

WhatsApp

Join Now

Telegram

Join Now

Instagram

Join Now