--Ads--

ಗ್ರಾಮೀಣ ಪ್ರತಿಭೆಗಳಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ : ಬಿ.ವಿ. ರಾಜಶೇಖರ್ ಗೌಡ

On: November 26, 2026 11:43 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಹೋಬಳಿ ಮಟ್ಟದ ಕಲೋತ್ಸವ ಹಾಗೂ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಗ್ರಾಮೀಣ ಪ್ರತಿಭೆಗಳಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಬಿ.ವಿ. ರಾಜಶೇಖರ್ ಗೌಡ

ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ಶ್ರೀಮತಿ ವಾಸಂತಿ ವೇಣುಗೋಪಾಲ್ ಆಂಗ್ಲ ಪ್ರೌಢಶಾಲೆಯ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಹೋಬಳಿ ಮಟ್ಟದ ಕಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಸಕ ಶರತ್ ಬಚ್ಚೇಗೌಡ ಅವರ ಅನುಪಸ್ಥಿತಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಬಿ.ವಿ. ರಾಜಶೇಖರ್ ಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಂವಿಧಾನ ದಿನಾಚರಣೆಯನ್ನೂ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿ.ವಿ. ರಾಜಶೇಖರ್ ಗೌಡ ಅವರು, ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಬಹಳ ಸಹಕಾರಿಯಾಗಿವೆ. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಇಂತಹ ಸ್ಪರ್ಧೆಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಇದೇ ದಿನ ಸಂವಿಧಾನ ದಿನಾಚರಣೆಯನ್ನು ಆಚರಿಸುತ್ತಿರುವುದು ವಿಶೇಷವಾಗಿದೆ. ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ದೇಶದ ಪ್ರಗತಿ, ಏಕತೆ ಹಾಗೂ ಸಮಗ್ರತೆಯನ್ನು ಮುನ್ನಡೆಸುವ ಪರಮೋಚ್ಚ ಶಕ್ತಿಯಾಗಿದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಗೌರವಿಸಿ ಅದರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಟಿ.ಎಸ್. ರಾಜಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ನೀಡಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿನ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಪ್ರತಿಭೆ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಶಾಸಕ ಶರತ್ ಬಚ್ಚೇಗೌಡ ಅವರು ಹೊಸಕೋಟೆ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಅಂಕಗಳನ್ನು ಗಳಿಸುವುದರ ಜೊತೆಗೆ ತಮ್ಮ ಗ್ರಾಮ ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಅದೇ ರೀತಿ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ ಹಾಗೂ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಎಚ್.ಎಂ. ಸುಬ್ಬರಾಜು ರವರು ಮಾತನಾಡಿ, ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ್ಯ, ನ್ಯಾಯ ಹಾಗೂ ಸಮಾನತೆಯನ್ನು ಕಲ್ಪಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಗೌರವಿಸಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳು, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಅರಿವು ಬೆಳೆಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಮುನಿಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಸಿದ್ದರಾಜು, ತಾವರೆಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ, ಮಾಜಿ ಅಧ್ಯಕ್ಷರಾದ ರವಿಕುಮಾರ್, ಗಂಗಾಪುರ ಮಂಜುನಾಥ್, ಬಸವಪ್ರಕಾಶ್, ಯಲಚಹಳ್ಳಿ ದೇವರಾಜ್, ವಸಂತಿ ವೇಣುಗೋಪಾಲ್ ಶಾಲೆಯ ಮುಖ್ಯಸ್ಥ ಶ್ರೀನಿವಾಸ್, ಹಾಗೂ ಕ್ಲಸ್ಟರ್ ಮಟ್ಟದ ಸಿಆರ್ ಪಿ ಅಣ್ಣಯ್ಯಪ್ಪ, ವಿಜಿ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನ್ಯಾನಮೂರ್ತಿ, ಹಾಗೂ ತಾವರೆಕೆರೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗುಲ್ಬದಿನ್ ತಾರ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರವೀಣ್ ಹಾಗೂ ವಿದ್ಯಾರ್ಥಿಗಳು ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now