--Ads--

ಭಕ್ತ ಕನಕದಾಸರ ಜೀವನವು ಸಮಾಜದ ಪ್ರತಿಯೊಬ್ಬರಿಗೂ ಆದರ್ಶವಾಗಿದೆ : ಮುನಿಗಂಗಯ್ಯ

On: November 27, 2026 9:00 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಭಕ್ತ ಕನಕದಾಸರ ಜಯಂತೋತ್ಸವ ಆಚರಣೆ

ಭಕ್ತ ಕನಕದಾಸರ ಜೀವನವು ಸಮಾಜದ ಪ್ರತಿಯೊಬ್ಬರಿಗೂ ಆದರ್ಶವಾಗಿದೆ : ಮುನಿಗಂಗಯ್ಯ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಾಸಶ್ರೇಷ್ಠ, ಭಕ್ತ ಕನಕದಾಸರ ಜಯಂತೋತ್ಸವವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿ ಗಂಗಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಭಕ್ತ ಕನಕದಾಸರು ತಮ್ಮ ಕೀರ್ತನೆಗಳು ಹಾಗೂ ದಾಸ ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಜಾತಿ, ಧರ್ಮ ಹಾಗೂ ಮೇಲು-ಕೀಳು ಎಂಬ ಭೇದಭಾವಗಳನ್ನು ಮೀರಿ ಸಮಾನತೆ, ಮಾನವೀಯತೆ, ಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಮಹತ್ವವನ್ನು ತಮ್ಮ ಸಾಹಿತ್ಯದ ಮೂಲಕ ಸಾರಿದ್ದಾರೆ ಎಂದು ತಿಳಿಸಿದರು.

ಕನಕದಾಸರ ಜೀವನವು ಸಮಾಜದ ಪ್ರತಿಯೊಬ್ಬರಿಗೂ ಆದರ್ಶವಾಗಿದ್ದು, ಅವರ ಕೀರ್ತನೆಗಳಲ್ಲಿರುವ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಸಾಹಿತ್ಯ ಮತ್ತು ಸಮಾಜ ಸುಧಾರಣೆಯ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಗಂಗಾಪುರ ಮಂಜುನಾಥ್, ಬಸವ ಪ್ರಕಾಶ್, ರಮೇಶ್, ಮಮತಾ ಮಂಜುನಾಥ್, ಮಾಜಿ ಉಪಾಧ್ಯಕ್ಷ ಸುಧಾಕರ್, ಹಿರಿಯ ಪತ್ರಕರ್ತ ಟಿ ನಾಗರಾಜ್, ಶಾಂತಕುಮಾರ್, ಕರವಸುಲಿಗಾರ ರಾಜಣ್ಣ, ಪಂಚಾಯತಿ ಸಿಬ್ಬಂದಿ ಬಚ್ಚೇಗೌಡ, ಮಂಜುನಾಥ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now