ವಿಜಯ ದರ್ಪಣ ನ್ಯೂಸ್…..
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮಹಾರಾಜಕುಮಾರಿ ಕೃಷ್ಣಾಜಮ್ಮಣ್ಣಿಯವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ
ಕೋಟಕ್ ಮಹೀಂದ್ರ ಬ್ಯಾಂಕ್‌ನ ಸಿಎಸ್‌ಆರ್ (CSR) ನಿಧಿಯಡಿ ಅಳವಡಿಸಲಾಗಿರುವ ಅತ್ಯಾಧುನಿಕ ಎಂಆರ್‌ಐ (MRI) ಯಂತ್ರ ಹಾಗೂ ಕಿಡ್ನಿ ಕಸಿ ತೀವ್ರ ನಿಗಾ ಘಟಕವನ್ನು ಲೋಕಾರ್ಪಣೆಗೊಳಿದ ಸಚಿವರು

ತಾಂಡವಪುರ ನವಂಬರ್ 27ಮೈಸೂರುನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮಹಾರಾಜಕುಮಾರಿ ಕೃಷ್ಣಾಜಮ್ಮಣ್ಣಿಯವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್‌ನ ಸಿಎಸ್‌ಆರ್ (CSR) ನಿಧಿಯಡಿ ಅಳವಡಿಸಲಾಗಿರುವ ಅತ್ಯಾಧುನಿಕ ಎಂಆರ್‌ಐ (MRI) ಯಂತ್ರ ಹಾಗೂ ಕಿಡ್ನಿ ಕಸಿ ತೀವ್ರ ನಿಗಾ ಘಟಕವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ರವರುಲೋಕಾರ್ಪಣೆಗೊಳಿಸಿದರು
ಇದೇ ವೇಳೆ ಮಾತನಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ಕೊಟಕ್ ಮಹೀಂದ್ರ ಬ್ಯಾಂಕ್‌ನವರು ಸಿಎಸ್‌ಆರ್ ನಿಧಿಯಡಿ 10 ಕೋಟಿಗೂ ಅಧಿಕ ವೆಚ್ಚದ ಎಂಆರ್‌ಐ ಯಂತ್ರವನ್ನು ಒದಗಿಸಿರುವುದು ಆರೋಗ್ಯ ಸೇವೆಗಳ ಸುಧಾರಣೆಗೆ ಮಹತ್ವದ ಕೊಡುಗೆಯಾಗಿದೆ. ಇದರಿಂದ ಮೈಸೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಅತ್ಯಾಧುನಿಕ ವೈದ್ಯಕೀಯ ತಪಾಸಣೆ ಹಾಗೂ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದ್ದು ಇದರ ಸೌಲಭ್ಯವನ್ನು ಸಾರ್ವಜನಿಕರು ಸಿದುಪಯೋಗ ಮಾಡಿಕೊಳ್ಳಬೇಕೆಂದು ಸಚಿವರು ಹೇಳಿದರು
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಕೊಡುಗೆಯನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದೆ. ಜನರ ಜೀವನಮಟ್ಟ ಸುಧಾರಣೆಯಲ್ಲಿ ಆಹಾರ, ಆರೋಗ್ಯ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೋಡಲ್ ಅಧಿಕಾರಿ ಡಾ. ಮೋಹನ್, ಸಿಎಒ ಡಾ. ಮಹೇಶ್, ಕೋಟಕ್ ಮಹೀಂದ್ರ ಬ್ಯಾಂಕ್‌ನ ಪ್ರತಿನಿಧಿ ರೀಧಿ ಭಾಟಿಯಾ ಸೇರಿದಂತೆ ಹಿರಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು









