ವಿಜಯ ದರ್ಪಣ ನ್ಯೂಸ್…….
ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಂಡಾಗ ಮಾತ್ರ ಸಮಾನತೆ ಸಾಧ್ಯ : ತಹಶೀಲ್ದಾರ್ ಗಗನಸಿಂಧು

ಶಿಡ್ಲಘಟ್ಟ : ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಪ್ರತಿಯೊಬ್ಬ ನಾಗರಿಕರೂ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಹಶೀಲ್ದಾರ್ ಗಗನ ಸಿಂಧು ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಸಂವಿಧಾನ ದಿನಾಚರಣೆ ಆಚರಣೆ ಸಭೆಯಲ್ಲಿ ಅವರು ಮಾತನಾಡಿದರು.
ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿದೆ ಎಂದು ಹೇಳಿದರು.
ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಂಡಾಗ ಮಾತ್ರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಮಾಜ ನಿರ್ಮಾಣ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ, ಪಶುವೈದ್ಯಾಧಿಕಾರಿ ಡಾ.ಶ್ರೀನಾಥ್, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ದೇವರಾಜ್, ಅರಣ್ಯ ಇಲಾಖೆಯ ಲೋಕೇಶ್, ಸಿಡಿಪಿಒ ಇಲಾಖೆಯ ಶಿವು ,
ದಲಿತ ಸಂಘರ್ಷ ಸಮಿತಿಯ ಚಲಪತಿ, ಬಿಸಿಎಂ, ರೇಷ್ಮೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ಹಾಗು ತಾಲ್ಲೂಕಿನ ವಿವಿಧ ಇಲಾಖೆಗಳ ಸಿಬ್ಬಂದಿ ಪಾಲ್ಗೊಂಡಿದ್ದರು.








