--Ads--

ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ಬಿ.ಎನ್.ರವಿಕುಮಾ‌ರ್

On: November 27, 2026 4:52 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸದೆ ಎಲ್ಲರೂ ಸಮಾನತೆಯಿಂದ ಬದುಕಬೇಕು ,
ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಕನಕದಾಸ ಜಯಂತಿಯಲ್ಲಿ ಬಾಗವಹಿಸಿ ಅವರು ಮಾತನಾಡಿದರು.

“ಕುಲ ಕುಲ ಎಂದು ಹೊಡೆದಾಡಬೇಡಿ ” ಎಂಬ ಕನಕದಾಸರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ
ತಮ್ಮ ವಚನಗಳು ಹಾಗೂ ಕೀರ್ತನೆಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಕನಕದಾಸರ ದೂರದೃಷ್ಟಿಯ ಚಿಂತನೆಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.

ಮಹನೀಯರ ಜಯಂತಿಗಳನ್ನು ಕೇವಲ ಆಡಂಬರಕ್ಕೆ ಸೀಮಿತಗೊಳಿಸದೆ ಅರ್ಥಪೂರ್ಣವಾಗಿ ಆಚರಿಸಬೇಕು, ಅವರ ಜೀವನದ ಆದರ್ಶಗಳನ್ನು ಅರಿತುಕೊಂಡು ಕನಿಷ್ಠ ಕೆಲವು ತತ್ವಗಳನ್ನಾದರೂ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು.

ನಾಡಪ್ರಭು ಕೆಂಪೇಗೌಡ, ಮಹರ್ಷಿ ವಾಲ್ಮೀಕಿ ಸೇರಿದಂತೆ ಅನೇಕ ಮಹನೀಯರು ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗದೆ ಎಲ್ಲ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ್ದಾರೆ ಅವರ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.

ಸುಮಾರು 500 ವರ್ಷಗಳ ಹಿಂದೆ ಬದುಕಿದ್ದ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿದ್ದ ಜಾತಿ ಪದ್ಧತಿ, ಮೂಢನಂಬಿಕೆ ಹಾಗೂ ಅನಿಷ್ಟ ಆಚರಣೆಗಳ ವಿರುದ್ಧ ಜನಜಾಗೃತಿ ಮೂಡಿಸಿದ್ದರು ಎಂದರು.

ಸಮುದಾಯದ ಹಿರಿಯರಾದ ಸಾದಲಿ ಮುನಿಕೃಷ್ಣಪ್ಪ ಸೇರಿದಂತೆ ಗಣ್ಯರು ವಿದ್ಯಾರ್ಥಿಗಳಿಗೆ ಶಾಲು, ಹಾರ, ನೆನಪಿನ ಕಾಣಿಕೆ ಹಾಗೂ ಪುಸ್ತಕ ನೀಡಿ ಗೌರವಿಸಿದರು.
ಈ ವೇಳೆ SSLC ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಹಾಗೂ ದ್ವಿತೀಯ PUC ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರು ವೈಯಕ್ತಿಕವಾಗಿ ತಲಾ 5 ಸಾವಿರ ರೂ. ನಗದು ನೀಡಿ ಪುರಸ್ಕರಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಕೆಂಪಣ್ಣ ವೃತ್ತದಲ್ಲಿರುವ ಶ್ರೀಕನಕ ಭಜನೆ ಮನೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು.

ಹಾಲುಮತ ಕುರುಬ ಸಮುದಾಯದ ಸಾಂಪ್ರದಾಯಿಕ ಆಚರಣೆಯಾದ ತಲೆ ಮೇಲೆ ತೆಂಗಿನಕಾಯಿ ಒಡೆಯುವ ಕಾರ್ಯಕ್ರಮ ಗಮನ ಸೆಳೆಯಿತು,ಭಾವಣ್ಣ ಹಾಗೂ ಅವರ ಶಿಷ್ಯರು ನಡೆಸಿಕೊಟ್ಟ ಈ ಆಚರಣೆಯನ್ನು ಭಕ್ತರು ಕುತೂಹಲದಿಂದ ವೀಕ್ಷಿಸಿದರು.

ಆನನಂತರ ಕನಕದಾಸರ ಮುತ್ತಿನ ಪಲ್ಲಕ್ಕಿ ಉತ್ಸವ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು, ಡೊಳ್ಳು ಕುಣಿತ, ತಮಟೆ ಹಾಗೂ ಕೀಲುಕುದುರೆ ಸೇರಿದಂತೆ ವಿವಿಧ ಜನಪದ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದವು.

ಈ ಸಂದರ್ಭದಲ್ಲಿ ಕಾವೇರಿ ಹ್ಯಾಂಡ್‌ಲೂಮ್ಸ್ ಅಧ್ಯಕ್ಷ ಬಿ.ಜಿ.ಗಣೇಶ್, ತಹಶೀಲ್ದಾರ್ ಎನ್.ಗಗನಸಿಂಧು,ತಾ.ಪಂ. ಇಒ ಆರ್. ಹೇಮಾವತಿ, ಬಿಇಓ ಪಿ.ಸ್ವಾಮಿ, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಎಂ.ರಾಮಯ್ಯ,
ಕುರುಬರ ಸಂಘದ ಜಿಲ್ಲಾಧ್ಯಕ್ಷ ಡಾಲ್ಫಿನ್ ಸ್ಕೂಲ್ ನಾಗರಾಜ್, ತಾಲ್ಲೂಕು ಅಧ್ಯಕ್ಷ ಕೆ.ಮಂಜುನಾಥ್,
ಉಪಾಧ್ಯಕ್ಷ ಸಿ.ರಾಮಣ್ಣ, ಪ್ರಧಾನ ಕಾರ್ಯದರ್ಶಿ ಎಂ. ರಾಮಾಂಜಿನಪ್ಪ, ಖಜಾಂಚಿ ಕೆ.ಸಿ.ನಾರಾಯಣಸ್ವಾಮಿ ,
ಮುನಿನಂಜಪ್ಪ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಗಂಗಾಭವಾನಿ ಎಫ್.ಪಿ.ಒ. ರೈತ ಷೇರುದಾರರಿಗೆ ಸೂಕ್ಷ್ಮ ಪೋಷಕಾಂಶ ಬಳಕೆ ಕುರಿತು ತರಬೇತಿ ಹಾಗೂ ಕೃಷಿ ಪರಿಕರ ವಿತರಣೆ

ಸೂಕ್ತ ದಾಖಲೆಗಳಿಲ್ಲದೆ ಉಳಿದಿರುವ ಮನೆ ಕಟ್ಟಡಗಳಿಗೆ ಅಧಿಕೃತ ದಾಖಲೆ ಒದಗಿಸಲು ಸರ್ಕಾರ ಜಾರಿ : ತಾ.ಪಂ. ಇಒ ಆರ್.ಹೇಮಾವತಿ

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಂಡಾಗ ಮಾತ್ರ ಸಮಾನತೆ ಸಾಧ್ಯ : ತಹಶೀಲ್ದಾರ್ ಗಗನಸಿಂಧು

ಹಸುಗೂಸಿಗೆ “ಬುಕ್ ಆಪ್ ರೆಕಾರ್ಡ್ ಪ್ರಶಸ್ತಿ” ಹುಟ್ಟಿದ 8ನೇ ದಿನಕ್ಕೇ ಆಧಾರ್, 12ನೇ ದಿನಕ್ಕೆ ರೇಷನ್ ಕಾರ್ಡ್

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಾಮಫಲಕ ಕೆಡಿಪಿ ಸಭೆಯಲ್ಲಿ ತೆರವು ಖಂಡನೀಯವಾದುದು ಹಾಗು ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಶಾಸಕ ಬಿ.ಎನ್.ರವಿಕುಮಾ‌ರ್

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ : ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ